ಫಲಪುಷ್ಪ ಪ್ರದರ್ಶನ, ಕೃಷಿ ಮೇಳಕ್ಕೆ ಕರೊನಾ ಅಡ್ಡಿ

27CBP3
Published on

ಚಿಕ್ಕಬಳ್ಳಾಪುರ : ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಫಲಪುಷ್ಪ ಪ್ರದರ್ಶನ ಮತ್ತು ಕೃಷಿ ಮೇಳ ರದ್ದಾಗಿದೆ.

ಪ್ರತಿ ವರ್ಷ ಜನವರಿ ಅಂತ್ಯದಲ್ಲಿ ಜಿಲ್ಲಾಡಳಿತ, ಜಿಪಂ, ಕಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದಿಂದ ಪ್ರದರ್ಶನ ಕೈಗೊಳ್ಳಲಾಗುತ್ತಿತ್ತು.

ಹೂವು ಹಣ್ಣು ಮತ್ತು ಮಣ್ಣಿನಲ್ಲಿ ತಯಾರಿಸಿದ ಕಲಾಕೃತಿಗಳು, ಜಿಲ್ಲೆಯನ್ನು ಪ್ರತಿನಿಧಿಸುವ ಸ್ಮಾರಕಗಳು, ನೀರೂರಿಸುವ ತಿಂಡಿ ತಿನಿಸುಗಳು, ಗಮನ ಸೆಳೆಯುವ ಅಲಂಕಾರಿಕ ವಸ್ತುಗಳು, ವಿವಿಧ ಇಲಾಖೆಗಳ ಸವಲತ್ತು, ರಾಸು ಮತ್ತು ಮೀನುಗಳ ಪ್ರದರ್ಶನ, ಸಾಂಪ್ರದಾಯಿಕ ಕೃಷಿ ಉಪಕರಣಗಳ ಪ್ರದರ್ಶನ, ವಿವಿಧ ಸ್ಪರ್ಧೆಗಳು, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮೇಳವು ಗಮನ ಸೆಳೆಯುತ್ತಿತ್ತು. ಇದೇ ವೇಳೆ ಜಿಲ್ಲೆ ಮಾತ್ರವಲ್ಲದೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದರು. ಮತ್ತೊಂದೆಡೆ ಕೃಷಿ ತಜ್ಞರು, ವಿಜ್ಞಾನಿಗಳು ಮಹತ್ತರ ಮಾಹಿತಿ ನೀಡುತ್ತಿದ್ದರು. ಜತೆಗೆ ಮಾದರಿ ರೈತರನ್ನು ಸನ್ಮಾನಿಸಿ, ಗೌರವಿಸಲಾಗುತ್ತಿತ್ತು.

ಮೇಳದಲ್ಲಿ ಸಾವಿರಾರು ಮಂದಿ ಒಂದೆಡೆ ಸೇರುವ, ವಿವಿಧ ಚಟುವಟಿಕೆ ಸೇರಿ ನಾನಾ ಕಾರಣಗಳಿಂದ ಸೋಂಕು ಹರಡುವ ಸಾಧ್ಯತೆ ಇದೆ. ಸುರಕ್ಷತೆಯ ದೃಷ್ಟಿಯಿಂದ ರದ್ದುಪಡಿಸಲಾಗಿದೆ ಎಂಬ ಮಾತು ಕೇಳಿ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net