ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಫಲಪುಷ್ಪ ಪ್ರದರ್ಶನ: ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ
Published on

 ಹಾಸನ: ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ತುಂಬಾ ಯಶಸ್ವಿಯಾಗಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್ ಪೂರ್ಣಿಮಾ ಹೇಳಿದರು.

ನಗರದ ಸಿಲ್ವರ್ ಜುಬಿಲಿ ಆರ್ಚರ್ಡ್ ಪಾರ್ಕ್‌ನಲ್ಲಿ ಏರ್ಪಡಿಸಿದ್ದ ಫಲಪುಷ್ಪ ಪ್ರದರ್ಶನ ಮಂಗಳವಾರ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಫಲಪುಷ್ಪ ಪ್ರದರ್ಶನ ಯಶಸ್ವಿಯಾಗಿ ಪ್ರದರ್ಶನಗೊಂಡಿರುವ ಅಲ್ಲದೇ ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ಮೂಡಿಬಂದಿದೆ.ಆದ್ದರಿಂದ ಮುಂಬರುವ ವರ್ಷದಲ್ಲಿ ಸದರಿ ಕಾರ್ಯಕ್ರಮವನ್ನು 10 ದಿನಗಳ ಕಾಲ ಹಮ್ಮಿಕೊಳ್ಳುವುದು ಎಂದರು.

ಹೇಮಾವತಿ ತೋಟಗಾರಿಕೆ ಸಂಘದ ಉಪಾಧ್ಯಕ್ಷ ಸುಜಾತಾ ನಾರಾಯಣ್, ಕಂದಲಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರದ ನಟರಾಜ್, ಹಾಗೂ ಕಂದಲಿ, ತೋಟಗಾರಿಕೆ, ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳು ಡಾ.ಎನ್. ಪಲ್ಲವಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net