ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಆರ್.ಲತಾ ಸೂಚನೆ

6CBP3Mandikallu (1)
Published on

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಮಂಡಿಕಲ್ಲುವಿನಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ ಹೋಬಳಿ ಮಟ್ಟದ ಅದಾಲತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜನರು ಸರ್ಕಾರದ ವಿವಿಧ ಸವಲತ್ತು ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಮತ್ತು ಮನೆ ಬಾಗಿಲಿಗೆ ತೆರಳಿ ಸೇವೆ ಒದಗಿಸಲು ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಿಲ್ಲಾಡಳಿತದ ನಡೆ, ಗ್ರಾಮಗಳ ಕಡೆ ಅದಾಲತ್ ಆಯೋಜಿಸಿದ್ದು ಇದಕ್ಕೆ ಒಳ್ಳೆಯ ಹೆಸರು ಬರುವಂತಾಗಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಈಗಾಗಲೇ ಪಿಂಚಣಿ ತೆಗೆದುಕೊಳ್ಳುತ್ತಿರುವ ಲಾನುಭವಿಗಳಿಗೆ ದೈಹಿಕ ಸಮಸ್ಯೆಯಿಂದ ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರೆ ಆಂಬುಲೆನ್ಸ್ ಇಲ್ಲವೇ ಇತರೆ ವಾಹನದ ಮೂಲಕ ಅಧಿಕಾರಿಗಳೇ ಕರೆ ತಂದು, ಅವರಿಂದ ಬೆರಳಚ್ಚು ಪಡೆಯಬೇಕು. ಪಿಂಚಣಿಯನ್ನು ಸಮರ್ಪಕವಾಗಿ ನೀಡಬೇಕು. ಎಲ್ಲರಿಗೂ ಕಡ್ಡಾಯವಾಗಿ ಬ್ಯಾಂಕ್ ಖಾತೆ ಮಾಡಿಸಬೇಕು ಎಂದರು.

ತಹಸೀಲ್ದಾರ್ ನಾಗಪ್ರಶಾಂತ್ ಮಾತನಾಡಿ, ಮಂಡಿಕಲ್ ಹೋಬಳಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳಿಗೆ ಹಳೇ 337 ಅರ್ಜಿ ಮತ್ತು ಹೊಸ 188 ಅರ್ಜಿ ಸೇರಿ 525 ಅರ್ಜಿ ಸ್ವೀಕರಿಸಿದ್ದು ಈ ಪೈಕಿ 288 ಅರ್ಜಿ ವಿಲೇವಾರಿಯಾಗಿದೆ ಎಂದು ತಿಳಿಸಿದರು.ಜಿಪಂ ಸಿಇಒ ಪಿ.ಶಿವಶಂಕರ್, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಪಂ ಮುಖ್ಯ ಯೋಜನಾಧಿಕಾರಿ ಧನುರೇಣುಕಾ, ಉಪ ಕಾರ್ಯದರ್ಶಿ ನೋಮೇಶ್ ಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net