ಫಲಾನುಭವಿಗಳಿಗೆ ಸವಲತ್ತು ತಲುಪಿಸಿ

11arsph2ep
Published on

ಅರಸೀಕೆರೆ: ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಸಲಹೆ ನೀಡಿದರು.


ತಾಲೂಕಿನ ಜಾವಗಲ್ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಜನರ ಆರ್ಥಿಕ ಪ್ರಗತಿಗಾಗಿ ಕೃಷಿ ಹಾಗೂ ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳ ಮೂಲಕ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ಅವು ಸಕಾಲಕ್ಕೆ ಫಲಾನುಭವಿಗಳನ್ನು ತಲುಪುವಂತೆ ಮಾಡುವ ಹೊಣೆಗಾರಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಮೇಲಿದೆ ಎಂದರು.


ಗ್ರಾಮಸಭೆಯಲ್ಲಿ ಪಾಲ್ಗೊಂಡಿದ್ದ ಹಲವರು ಸೆಸ್ಕ್ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆ ದೂರುಗಳ ಸುರಿಮಳೆಗೈದರು. ತಕ್ಷಣವೇ ಮಧ್ಯೆ ಪ್ರವೇಶಿಸಿದ ಕೆ.ಎಸ್.ಲಿಂಗೇಶ್, ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕಗಳನ್ನು ಬದಲಿಸುವ ಜತೆಗೆ ರೈತರು ಹಾಗೂ ಗ್ರಾಹಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಎಇ ಪ್ರಕಾಶ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಂಜುನಾಥ್, ಪಿಡಿಒ ರವಿ, ಆರ್‌ಐ ಮಂಜುನಾಥ್, ಕಾರ್ಯದರ್ಶಿ ನಂದಿನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net