ಫಸಲ್ ಬಿಮಾ ಯೋಜನೆ ಸದುಪಯೊಗಕ್ಕೆ ಸಚಿವರು ಕರೆ

ಫಸಲ್ ಬಿಮಾ ಯೋಜನೆ ಸದುಪಯೊಗಕ್ಕೆ ಸಚಿವರು ಕರೆ
Published on

ಹಾಸನ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಜಿಲ್ಲೆಯ ಎಲ್ಲಾ ರೈತರು ಬೆಳೆ ವಿಮೆ ಯೋಜನೆಯಡಿ ನೊಂದಾಯಿಸಿಕೊಂಡು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತು ವಾರಿ ಸಚಿವ ಕೆ.ಎನ್.ರಾಜಣ್ಣ ಅವರು ತಿಳಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಸೋಮವಾರ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಗ್ರಾಮ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ,ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net