

ಚಿಕ್ಕಮಗಳೂರು: ನಗರಸಭೆಯಿಂದ ೧೫ ದಿನಗಳ ಒಳಗಾಗಿ ಫುಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ವಸ್ತುಗಳನ್ನು ತೆರವುಗೊಳಿಸದ ವರ್ತಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಸಭೆಯಿಂದ ಗುರುವಾರ ನಗರದ ಮಲ್ಲಂದೂರು ರಸ್ತೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರಸಭೆಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ತರಕಾರಿ ಸೇರಿದಂತೆ ಹೂವು, ಹಣ್ಣು ಇನ್ನಿತರೆ ಅಂಗಡಿಗಳನ್ನು ನಡೆಸುತ್ತಿರುವ ವರ್ತಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಡಬಾರದು ಎಂದು ಹೇಳಿದರು.
ಕೆಲವರು ಪರವಾನಗಿ ಪಡೆಯದೆ ಎಷ್ಟು ವರ್ಷಗಳಾಗಿವೆ. ಅಲ್ಲಿಂದ ಇಲ್ಲಿಯವರೆಗೆ ವರ್ತಕರಿಗೆ ದಂಡ ಸಹಿತ ಶುಲ್ಕ ವಿಧಿಸಿ ಪರವಾನಗಿ ನೀಡಬೇಕು ಹಾಗೂ ಖಾಲಿ ನಿವೇಶನಗಳಲ್ಲಿ ಗಿಡಘಂಟಿಗಳು ಬೆಳೆದಿದ್ದರೆ ಸಂಬAಧಪಟ್ಟ ಮಾಲಿಕರಿಗೆ ಸೂಚನೆ ನೀಡಿ ಸ್ವಚ್ಚತೆ ಮಾಡಿಕೊಳ್ಳುವಂತೆ ತಾಕೀತು ಮಾಡಬೇಕು ಎಂದು ತಿಳಿಸಿದರು.
ಕಸವನ್ನು ನಿಗದಿತ ಸ್ಥಳದಲ್ಲಿ ಹಾಕದೆ ಎಲ್ಲೆಂದರಲ್ಲಿ ಹಾಕಿ ನಗರದ ಸೌಂದAiÀiðಕ್ಕೆ ಧಕ್ಕೆ ತರಲಾಗುತ್ತಿದೆ. ಈ ಬಗ್ಗೆ ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ, ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಲಾಡ್ಜ್ಗಳ ನಿರ್ಮಾಣಕ್ಕೆ ನಗರಸಭೆಯಿಂದ ಪರವಾನಗಿ ನೀಡುವಾಗ ನಿಬಂಧನೆಗಳನ್ನು ವಿಧಿಸಿದ್ದು, ಕಟ್ಟಡ ಪೂರ್ಣಗೊಂಡ ಬಳಿಕ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದ ಜಾಗದಲ್ಲಿ ಪೆಟ್ಟಿಗೆ ಅಂಗಡಿಗೆ ಅನುಮತಿ ನೀಡಿ ವ್ಯಾಪಾರ ಮಾಡುತ್ತಿದ್ದಾರೆ ಎಂದು ದೂರಿದರು.
ಸಧ್ಯದಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರ್‌ಟಿಓ, ಪೊಲೀಸರು ಮತ್ತು ಪರಿಸರ ಇಲಾಖೆಯ ಮುಖ್ಯಸ್ಥರನ್ನೊಳಗೊಂಡ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಹಾಲಿ ಇರುವ ರಸ್ತೆಯನ್ನು ಸ್ವಚ್ಚವಾಗಿಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಪೌರಕಾರ್ಮಿಕರ ಹುದ್ದೆ ಭರ್ತಿಯಾಗದ ಹೊರತು ಸ್ವಚ್ಛತೆ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ನಗರದಲ್ಲಿ ಅಂಗಡಿಗಳು ಹೆಚ್ಚಾದಂತೆ ಕಸ ವಿಲೇವಾರಿ ಕಷ್ಟವಾಗುತ್ತಿದೆ. ಹಾಲಿ ೨೦೩ ಪೌರ ಕಾರ್ಮಿಕರ ಹುದ್ದೆಗೆ ಕೇವಲ ೧೭೫ ಜನ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ವೈದ್ಯರು, ದಾದಿಯರು, ಪೌರ ಕಾರ್ಮಿಕರು, ಶಿಕ್ಷಕರನ್ನು ಭರ್ತಿಮಾಡಲು ಆಧ್ಯತೆ ನೀಡಬೇಕು ಎಂದು ಸದನದಲ್ಲಿ ಆಗ್ರಹಿಸುವುದಾಗಿ ಭರವಸೆ ನೀಡಿದರು.
ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ಇರುವ ರಸ್ತೆಬದಿ ಫುಟ್‌ಪಾತ್ ಮೇಲೆ ವಸ್ತುಗಳನ್ನಿಟ್ಟು ವ್ಯಾಪಾರ ಮಾಡುತ್ತಿರುವುದರಿಂದ ಜನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ಫಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವ ಮೂಲಕ ವರ್ತಕರಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದರು.
ನಗರಸಭೆ ಸದಸ್ಯ ಎ.ಸಿ. ಕುಮಾರ್‌ಗೌಡ ಮಾತನಾಡಿ, ನಗರವನ್ನು ಸುಂದರ ಮತ್ತು ಸ್ವಚ್ಛ ನಗರವನ್ನಾಗಿ ಮಾಡಬೇಕೆಂಬ ಉz್ದೆÃಶದೊಂದಿಗೆ ನಗರಸಭೆಯಿಂದ ಕಳೆದ ಒಂದು ತಿಂಗಳಿನಿAದ ಸಂತೆ ಮಾರ್ಕೆಟ್ ಸ್ವಚ್ಛತೆ ಹಾಗೂ ಎಂಜಿ ರಸ್ತೆ, ಮಲ್ಲಂದೂರು ರಸ್ತೆಯ ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಟ್ಟಿರುವುದನ್ನು ತೆರವುಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಗೋಪಿ, ಲಕ್ಷö್ಮಣ್, ಆಯುಕ್ತ ಬಿ.ಸಿ ಬಸವರಾಜು, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ಅಣ್ನಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.