ಫೆ.12ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Published on

ಅರಕಲಗೂಡು: ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಫೆ.12ಕ್ಕೆ ತಾಲೂಕಿನ ಕೊಣನೂರಿನಲ್ಲಿ ಆಯೋಜಿಸಲು ಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎ.ಮಂಜು ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ತಾಲೂಕಿನಲ್ಲಿ ನಡೆಸಲು ಮುಂದೆ ಬಂದಿದೆ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ವೈಭವವನ್ನು ಮೇಳೈಸುವ ಈ ಕಾರ್ಯಕ್ರಮ ನಮ್ಮ ಯುವಜನರಿಗೆ ಪ್ರೇರಣೆ ನೀಡಲಿದೆ. ಈ ಹಿಂದೆ ತಾವು ಸಚಿವರಾಗಿದ್ದ ವೇಳೆ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಸಿದ್ದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿತ್ತು. ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೀಕ್ಷಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಮುಖಂಡರು, ಸಂಘ-ಸಂಸ್ಥೆಗಳು ಹೆಚ್ಚಿನ ಆಸಕ್ತಿ ವಹಿಸಿ ಸಹಕರಿಸುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net