ಫೆ.17 ರಿಂದ 19ರವರೆಗೆ ಮೈಸೂರಿನಲ್ಲಿ ರಾಷ್ಟ್ರಮಟ್ಟದ ಮ್ಯಾಟ್ ಕಬಡ್ಡಿ

kabaddi
Published on

ಮೈಸೂರು: ಅಶೋಕಪುರಂ ಫ್ರೆಂಡ್ಸ್ , ಭಾರತೀಯ ಅಮೆಚೂರ್ ಕಬಡ್ಡಿ ಸಂಸ್ಥೆ, ರಾಜ್ಯ ಮತ್ತು ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ವತಿಯಿಂದ ಫೆ.17 ರಿಂದ 19ರವರೆಗೆ ಅಶೋಕಪುರಂ ಎಂಟಿಎಂ ಶಾಲೆ ಮೈದಾನದಲ್ಲಿ ರಾಷ್ಟ್ರಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಹಮ್ಮಿಕೊಂಡಿದೆ ಎಂದು ರಾಷ್ಟ್ರೀಯ ಕಬಡ್ಡಿ ಆಟಗಾರ ಮಧುಸೂದನ್ ತಿಳಿಸಿದರು.

ಪಂದ್ಯಾವಳಿಗೆ ಸಂಸದ ವಿ. ಶ್ರೀನಿವಾಸ ಪ್ರಸಾದ್ ಚಾಲನೆ ನೀಡುವರು. ತಮಿಳುನಾಡು, ಪಾಂಡಿಚೇರಿ, ಕೇರಳ, ಬ್ಯಾಂಕ್ ಆಫ್ ಬರೋಡ, ಕರ್ನಾಟಕ, ಪೂಣೆ, ಹರಿಯಾಣ ತಂಡಗಳು ಪಾಲ್ಗೊಳ್ಳಲಿವೆ. ಪ್ರಥಮ 1 ಲಕ್ಷ ರೂ., ದ್ವಿತೀಯ 50 ಸಾವಿರ ರೂ. ಹಾಗೂ ತೃತೀಯ 25 ಸಾವಿರ ರೂ.ನಗದು ಬಹುಮಾನ ನೀಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ರಾಜೇಂದ್ರ, ಸಿ. ಈಶ್ವರ್, ಎನ್. ನಾಗರಾಜು, ಸೋಮಶೇಖರ್, ವೆಂಕಟರಾಜು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net