

ಹಾಸನ : ರೈತರ ಬ್ಯಾಂಕ್‌ನ ಸಾಲ ವಸೂಲಾತಿಗಾಗಿ ಅವರು ಅಸ್ತಿಯನ್ನು ಇ-ಟೆಂಡರ್‌ಮೂಲಕ ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ ಇದನ್ನ ಖಂಡಿಸಿ ಫೆ.20 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ ಅಧ್ಯಕ್ಷ ಜಿ.ಜಿ.ಹಳ್ಳಿ ನಾರಾಯಣಸ್ವಾಮಿ ಅವರು ತಿಳಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೆಳಿಗ್ಗೆ 11 ಗಂಟೆಗೆ ಮೆರವಣಿಗೆ ನಡೆಸಿ ನಂತರ ಡಿಸಿ ಕಚೇರಿ ಎದುರು ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬ್ಯಾಂಕ್‌ಗಳು ರೈತರ ಸಾಲಕ್ಕೆ ಬಡ್ಡಿ, ಚಕ್ರಬಡ್ಡಿ ಹಾಕಿ ಇ-ಆಕ್ಟನ ಮೂಲಕ ರೈತರ ಜಮೀನನ್ನು ಹರಾಜು ಹಾಕಿ ರೈತರನ್ನು ಶೋಚನೀಯ ಸ್ಥಿತಿಗೆ ತಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರು, ಸಾರ್ವಜನಿಕರಿಗೆ ಸಿಗುತ್ತಿರುವ ಧನ ಸಹಾಯವನ್ನು ಬ್ಯಾಂಕ್‌ನವರು ಸಾಲಕ್ಕೆ ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳು ರೈತರ ಜೀವನದೊಂದಿಗೆ ಆಟವಾಡುತ್ತಿದ್ದು, ಅಪಾರ ಪ್ರಮಾಣದಲ್ಲಿ ಬೆಲೆಬಾಳುವ ಜಮೀನನ್ನು ಇ-ಟೆಂಡರ್ ಮೂಲಕ ರೈತನಿಗೆ ಗೊತ್ತೆ ಆಗದ ರೀತಿಯಲ್ಲಿ ಕಡಿಮೆ ಬೆಲೆಗೆ ಹರಾಜು ಹಾಕುತ್ತಿದ್ದಾರೆ. ಹೀಗಾಗಿ ಕೂಡಲೇ ಇ-ಟೆಂಡರ್ ಪ್ರಕ್ರಿಯೆ ನಿಲ್ಲಿಸಬೇಕೆಂದು ಆಗ್ರಹಿಸಿದರು.
ವೃದ್ಧಾಪ್ಯ ವೇತನ, ವಿಧವಾ ವೇತನ, ನರೇಗಾ ಯೋಜನೆಯ ಹಣ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನವನ್ನು ಬ್ಯಾಂಕ್‌ನವರು ಮುಟ್ಟುಗೋಲು ಹಾಕಿಕೊಂಡು ರೈತರನ್ನು ವಂಚಿಸಲಾಗುತ್ತಿದೆ. ಬರಗಾಲ, ಕಾಡಾನೆಗಳ ಹಾವಳಿಯಿಂದ ರೈತರು ಸಾಲ ಮರುಪಾವತಿ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಸರ್ಕಾರ ಬೆಳೆ ಸಾಲ,ಟ್ರಾೃಕ್ಟರ್, ಟಿಲ್ಲರ್, ಬೋರ್ವೆಲ್ ಸೇರಿ ಕೃಷಿಗೆ ಸಂಬಂಧಿಸಿದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಕಣಗಾಲು ಮೂರ್ತಿ, ಮಂಜು, ಶಿವಣ್ಣ, ಪಾರ್ವತಮ್ಮ ಹಾಜರಿದ್ದರು.