ಫೆ.21ರಂದು ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ

Published on

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆ.21ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಖೋ-ಖೋ, ಕಬ್ಬಡ್ಡಿ, ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಕ್ರೀಡೆಗಳಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಫೆಬ್ರವರಿ 21ರಂದು ಬೆಳಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ದೂ.ಸಂ 08226-224932, ಮೊ.ಸಂ 9916466659 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net