

ಚಾಮರಾಜನಗರ: ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ.4ರಂದು ರಾಮಸಮುದ್ರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ರಾಮಸಮುದ್ರ ಫೀಡರ್ ನ ದೊಡ್ಡಬೀದಿ, ತಿಬ್ಬಳ್ಳಿ ಕಟ್ಟೆ ರಸ್ತೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.