ಫೆ.4ರಿಂದ ಗುರು ಪೂರ್ಣಿಮೆ

30ark1
Published on

ಅರಕಲಗೂಡು: ಪಟ್ಟಣದ ಕ್ರೀಡಾಂಗಣದಲ್ಲಿ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತ ಪೂರ್ಣಿಮೆ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಫೆ.4, 5 ಮತ್ತು 6ರಂದು ನಡೆಯುವ ಗುರು ತೋರಿದ ದಾರಿ ತಿಂಗಳ ಮಾಮನ ತೇರು ಶತ ಪೂರ್ಣಿಮೆ ಹಾಗೂ ಗುರುವಂದನೆ ಕಾರ್ಯಕ್ರಮಕ್ಕೆ ಭವ್ಯ ವೇದಿಕೆ ನಿರ್ಮಾಣ ಮಾಡಲಾಗುತ್ತಿದ್ದು, ಗಣ್ಯರು ಹಾಗೂ ಭಕ್ತರು ಕುಳಿತುಕೊಳ್ಳಲು ಆಸನಗಳು ಹಾಗೂ ಅದ್ದೂರಿ ಸಭಾಭವನ ನಿರ್ಮಿಸಬೇಕಿದೆ. ಕಾರ್ಯಕ್ರಮಕ್ಕೆ ಬರುವ ಜನತೆಗೆ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಸೇರಿದಂತೆ ಯಾವುದೇ ರೀತಿಯ ಕೊರತೆಗಳು ಉಂಟಾಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಭಕ್ತರು ಉತ್ತಮ ಸಹಕಾರ ನೀಡುವ ಮೂಲಕ ಆದಿಚುಂಚನಗಿರಿ ಜಗದ್ಗುರು ಹಾಗೂ ಶ್ರೀ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾಗಬೇಕು ಎಂದು ಮನವಿ ಮಾಡಿದರು.

ಕಬ್ಬಳಿ ಶಿವಪುತ್ರ ಸ್ವಾಮೀಜಿ, ಶಾಸಕ ಎ.ಟಿ. ರಾಮಸ್ವಾಮಿ, ಮಾಜಿ ಸಚಿವ ಎ. ಮಂಜು, ಬಿಜಿಎಸ್ ಕಾಲೇಜು ಪ್ರಾಂಶುಪಾಲ ಮಹೇಶ್ ಹೊಡೆನೂರು, ಹಾರಂಗಿ ಮಹಾಮಂಡಲ ಅಧ್ಯಕ್ಷ ಚೌಡೇಗೌಡ, ಜಿಪಂ ಮಾಜಿ ಸದಸ್ಯ ಎಚ್.ಎಸ್. ಶಂಕರ್, ಮುಖಂಡರಾದ ಗೋವಿಂದೇಗೌಡ, ಮಂಜುನಾಥ್, ಅನಿಲ್‌ಗೌಡ, ಜನಾರ್ದನ ಗುಪ್ತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net