ರಾಷ್ಟ್ರ ಮಟ್ಟದ ಮಹರ್ಷಿ ವ್ಯಾಸ ಸಮ್ಮಾನ್ ಪ್ರಶಸ್ತಿ ಪುರಸ್ಕೃತ . ಯುವ ಸಾಹಿತಿ ಡಾ. ಕುಪ್ಪನಹಳ್ಳಿ ಎಂ ಭೈರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಚಾಮರಾಜನಗರ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಎಂ ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸುವರು. ಮಾನವತೆಯ ಕ್ರಾಂತಿ ಜ್ಯೋತಿ ಸಾವಿತ್ರಿ ಬಾ ಪುಲೆ ವಿಷಯ ಕುರಿತು ಚಾಮರಾಜನಗರ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕಿ ಡಾ. ಆರ್ ಶಶಿಕಲಾ ಹಾಗೂ ಬಾಬಾ ಸಾಹೇಬರ ಭೀಮಬಲ ರಮಾ ಬಾಯಿ ವಿಷಯ ಕುರಿತು ನಿವೃತ್ತ ಕನ್ನಡ ಉಪನ್ಯಾಸಕಿ ಹಾಗೂ ರೋಟರಿ ಸಂಸ್ಥೆಯ ಅಧ್ಯಕ್ಷೆ ಸರಸ್ವತಿ ಹೊನ್ನಪ್ಪ ಮಾತನಾಡುವರು. ಮುಖ್ಯ ಅತಿಥಿಗಳಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಕೊಂಗರಹಳ್ಳಿ ಹಾಗೂ ಸಾಹಿತ್ಯ ಮಿತ್ರಕೂಟದ ಅಧ್ಯಕ್ಷ ದೊರೆಸ್ವಾಮಿ ಭಾಗವಹಿಸುವರು ಕೊಳ್ಳೇಗಾಲ ತಾಲೂಕು ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಡಾ. ಡಿ. ಎಲ್ ಕವಿತ ಪ್ರಾಸ್ತಾವಿಕ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.