ಚಾಮರಾಜನಗರ: ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು 8 ರಂದು ಹಮ್ಮಿಕೊಂಡಿರುವುದರಿಂದ ರಾಮಸಮುದ್ರದ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ರಾಮಸಮುದ್ರ ಫೀಡರ್ ವ್ಯಾಪ್ತಿಗೆ ಒಳಪಡುವ ದೊಡ್ಡ ಬೀದಿ, ತಿಬ್ಬಳ್ಳಿ ಕಟ್ಟೆ ರಸ್ತೆ, ಬಾಲರಪಟ್ಟಣ, ಕೋಟೆ ಬೀದಿ, ವಿವೇಕನಗರ, ಬಿ.ಎಸ್.ಎನ್.ಎಲ್ ಕಚೇರಿ ಮತ್ತು ಭಗೀರಥನಗರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.