

ಬಾಗಲಕೋಟೆ: ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಸಮಾಜ ಮತ್ತು ಕಲಬುರಗಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ಸಹಯೋಗದಲ್ಲಿ ಫೆ.೧, ೨ ರಂದು ರಾಜ್ಯ ಮಟ್ಟದ ೩ನೇ ಬೃಹತ್ ಸಮಾವೇಶ, ವಿಚಾರ ಸಂಕಿರಣ, ಗ್ರಂಥಗಳ ಲೋಕಾರ್ಪಣೆ, ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಸಮಾರಂಭ ಕೂಡಲಸಂಗಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರ್ಗಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠದ ಅಧ್ಯಕ್ಷ ಜಿ.ಎನ್.ಪಾಟೀಲ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೧ ಮತ್ತು ೨ ರಂದು ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಸಭಾಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಡಿನ ವಿವಿಧ ಮಠಾಽÃಶರು, ೨೦ ಸಾವಿರಕ್ಕೂ ಹೆಚ್ಚು ಭಾಗವಹಿಸಲಿದ್ದಾರೆ ಎಂದರು.
ಫೆ.೧ ರಂದು ಬೆಳಗ್ಗೆ ೧೦ ಗಂಟೆಗೆ ಹಂಪಿ ಕನ್ನಡ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಕೊಟ್ಟೂರು ಸ್ವಾಮಿ ಸಂಸ್ಥಾನಮಠದ ಬಸವಲಿಂಗ ಸ್ವಾಮೀಜಿ, ಚಿತ್ತರಗಿ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ಡಾ.ದೇವರಕೊಂಡಾರೆಡ್ಡಿ, ಬಿವಿವಿ ಸಂಘದ ಆಡಳಿತಾಽಕಾರಿ ಡಾ.ವಿ.ಎಸ್.ಕಟಗಿಹಳ್ಳಿಮಠ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಹಂಡೆ ಅರಸರ ಆಕರಗಳು, ಹಂಡೆ ಅರಸರ ಅಭಿವೃದ್ಧಿ ಚಿಂತನೆಗಳು, ಹಂಡೆ ಅರಸರ ಪ್ರಕಟಿತ ಕೃತಿಗಳ ಪರಾಮರ್ಶೆ, ಹಂಡೆ ವಜೀರ ಜನಾಂಗದ ಅನನ್ಯತೆ ಕುರಿತು ವಿಚಾರ ಗೋಷ್ಠಿಗಳು ನಡೆಯಲಿದ್ದು, ನಾಡಿನ ಚಿಂತಕರು, ಸಂಶೋಧಕರು ಭಾಗವಹಿಸಲಿದ್ದಾರೆ. ಫೆ.೨ ರಂದು ಬೆಳಗ್ಗೆ ೧೦ ಗಂಟೆಗೆ ಬೃಹತ್ ಸಮಾವೇಶ ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ಸಚಿವ ಶಿವಾನಂದ ಪಾಟೀಲ ಹಂಡೆ ಅರಸರ ಭಾವಚಿತ್ರ ಅನಾವರಣಗೊಳಿಸಲಿದ್ದಾರೆ. ಸಂಸದರಾದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಶಾಸಕರಾದ ನಾರಾ ಭರತರೆಡ್ಡಿ, ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ ಎಸ್.ಆರ್.ಪಾಟೀಲ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಜನಪ್ರತಿನಿಽಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ಎಸ್.ಎಸ್.ಪಾಟೀಲ, ಪ್ರಧಾನ ಕಾರ್ಯದರ್ಶಿ ಆರ್.ಎಸ್. ಪಾಟೀಲ, ಉಪಾಧ್ಯಕ್ಷ ಎಸ್.ಬಿ. ಬಳವಾಟ ಉಪಸ್ಥಿತರಿದ್ದರು.