ಫೆ.೧೦, ೧೧ ರಂದು ಲೋಕಾರ್ಪಣೆ ಕಾರ್ಯಕ್ರಮ

bkt-3-2
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೆಬ್ಬಳ್ಳಿ ಅಜ್ಜನವರ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡೆಗಡೆಗೊಳಿಸಿದರು. ಮುಖಂಡರಾದ ಮಲ್ಲಿಕಾರ್ಜುನ ಬೆಳಗಲ್, ರವಿ ಕಲ್ಲೂರ, ಮುತ್ತು ಮುಪ್ಪಯ್ಯನವರ, ವಿನಾಯಕ ಕೆಂಚನಗುಡ್ಡ, ದೇವೇಂದ್ರಪ್ಪ ತಿಮ್ಮಣ್ಣ, ಅಮರ ಕಳ್ಳಿಗುಡ್ಡ, ಯಲ್ಲಪ್ಪ ಕ್ಯಾದಿಗೇರಿ ಸೇರಿದಂತೆ ಇತರರು ಇದ್ದರು.
Published on

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಗುರು ದೊಡ್ಡಲಾಲಸಾಬವಲಿ ದೇವರ ಲೋಕಾರ್ಪಣೆ ಕಾರ್ಯಕ್ರಮ ಫೆ. ೧೦, ೧೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಹೆಬ್ಬಳ್ಳಿ ಅಜ್ಜನವರ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೧೧ ರಂದು ಬೆಳಗ್ಗೆ ೧೧ ಗಂಟೆಗೆ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಲಿದ್ದಾರೆ. ಅಭಿನವ ಶಿವಾನಂದ ಸ್ವಾಮೀಜಿ, ವಿಶ್ವರಾಜೇಂದ್ರ ಸ್ವಾಮೀಜಿ, ಮಹಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಫೆಕೀರ ಸಿದ್ದರಾಮ ಸ್ವಾಮೀಜಿ, ಯಚ್ಚರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಭೀಮಸೇನ ಚಿಮ್ಮನಕಟ್ಟಿ ಘನ ಉಪಸ್ಥಿತಿ ಇರುವರು. ಸಚಿವ ಶಿವರಾಜ ತಂಗಡಗಿ, ಶಾಸಕರಾದ ಎಚ್.ವೈ.ಮೇಟಿ, ವಿಜಯಾನಂದ ಕಾಶಪ್ಪನವರ, ವಿ.ಪ ಸದಸ್ಯ ಪಿ.ಎಚ್.ಪೂಜಾರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಎಂ.ಕೆ.ಪಟ್ಟಣಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ, ಕಾಂಗ್ರೆಸ್ ಮುಖಂಡ ಹೊಳಬಸ್ಸು ಶೆಟ್ಟರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಫೆ.೧೦ ರಂದು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಮುಖಂಡರಾದ ಮಲ್ಲಿಕಾರ್ಜುನ ಬೆಳಗಲ್, ರವಿ ಕಲ್ಲೂರ, ಮುತ್ತು ಮುಪ್ಪಯ್ಯನವರ, ವಿನಾಯಕ ಕೆಂಚನಗುಡ್ಡ, ದೇವೇಂದ್ರಪ್ಪ ತಿಮ್ಮಣ್ಣ, ಅಮರ ಕಳ್ಳಿಗುಡ್ಡ, ಯಲ್ಲಪ್ಪ ಕ್ಯಾದಿಗೇರಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net