

ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.೧೫ ರಂದು ಬೆಳಗ್ಗೆ ೧೧ ಗಂಟೆಗೆ ನವನಗರದ ಕಲಾ ಭವನದಲ್ಲಿ ಸಂತ ಸೇವಾಲಾಲ ಜಯಂತಿ ಹಮ್ಮಿಕೊಳ್ಳಲಾಗಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಂಜಾರ ಸಮಾಜದ ಜಿಲ್ಲಾಧ್ಯಕ್ಷ ಬಲರಾಮ ನಾಯಕ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೯.೩೦ ಗಂಟೆಗೆ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಂತರ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯೂ ಜಿಲ್ಲಾಡಳಿತ ಭವನದಿಂದ ಆರಂಭವಾಗಿ ವಿವಿಧೆಡೆ ಸಂಚರಿಸಿ ಕಲಾ ಭವನ ತಲುಪಲಿದೆ ಎಂದರು.
ಕುಮಾರ ಮಹಾರಾಜ ಸ್ವಾಮೀಜಿ ಮಾತನಾಡಿ, ಬೆಳಗ್ಗೆ ೧೧ ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ. ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆಯಲ್ಲಿ ವಹಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಗೋವಿಂದ ಕಾರಜೋಳ, ಸಚಿವ ಮುರುಗೇಶ ನಿರಾಣಿ ಇತರರು ಅಗಮಿಸಲಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ರಾಜು ಲಮಾಣಿ, ರತ್ನಪ್ಪ ರಾಠೋಡ, ಚಂದ್ರಶೇಖರ ರಾಠೋಡ, ಕೃಷ್ಣಪ್ಪ ಲಮಾಣಿ ಇತರರು ಇದ್ದರು.