ಫೆ.೨೫ ರಂದು ಕಂದಾಯ ಸಚಿವರ ಗ್ರಾಮ ವಾಸ್ತವ್ಯ

bkt-21-1
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಗಳ ಪೂರ್ವ ಸಿದ್ದತೆ ಸಭೆ ಜರುಗಿತು.
Published on

ಬಾಗಲಕೋಟೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಫೆ.೨೫ ರಂದು ಬೀಳಗಿ ಮತಕ್ಷೇತ್ರದ ತಾಲೂಕಿನ ಕಲಾದಗಿ ಗ್ರಾಮದಲ್ಲಿ ಕಂದಾಯ ಸಚಿವರಾದ ಆರ್.ಅಶೋಕ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಮೆರವಣಿಗೆ, ವೇದಿಕೆ ಕಾರ್ಯಕ್ರಮ, ಗ್ರಾಮ ಸಭೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ೬ ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಇಲಾಖೆಯ ಯೋಜನೆಗಳ ಸೌಲಭ್ಯಗಳನ್ನು ವಿತರಿಸಲಿದ್ದಾರೆ ಎಂದರು.

ಫಲಾನುಭವಿಗಳ ಪಟ್ಟಿ ಸಿದ್ದಪಡಿಸುವ ನಿಟ್ಟಿನಲ್ಲಿ ಆಯಾ ತಾಲೂಕಿನ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಹಸೀಲ್ದಾರರನ್ನು ಮೇಲುಸ್ತುವಾರಿಯಾಗಿ ನೇಮಿಸಲಾಗುತ್ತಿದ್ದು, ಆಯಾ ತಾಲೂಕಿನ ವಿವಿಧ ಇಲಾಖೆಯ ಫಲಾನುಭವಿಗಳ ಮಾಹಿತಿಯನ್ನು ಪಡೆದು ಪಟ್ಟಿ ಸಿದ್ದಪಡಿಸಿಕೊಂಡು ಕಾರ್ಯಕ್ರಮಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಫಲಾನುಭವಿಗಳ ಪಟ್ಟಿನ್ನು ಸಿದ್ದಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಚಿವರು ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಮಾಡಲಿದ್ದು, ವಾಸ್ತವ್ಯಕ್ಕೆ ಹತ್ತಿರದ ಸರ್ಕಾರಿ ವಸತಿ ಶಾಲೆಯನ್ನು ಗುರುತಿಸಿ ಎಲ್ಲ ರೀತಿಯ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net