ಫೆ.೨೭ ರಂದು ಸರ್ಕಾರಿ ನೌಕರರ ಮಹಾ ಸಮ್ಮೇಳನ

bkt-20-1
ಬಾಗಲಕೋಟೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಪದಾಧಿಕಾರಿಗಳಾದ ಗೋಪಾಲ ನೀಲನಾಯಕ, ವಿಠ್ಠಲ ವಾಲಿಕಾರ, ಸಂಜೀವ ಸತ್ಯರೆಡ್ಡಿ, ಸುರೇಶ ಇಂಜಗನೇರಿ, ಅನಿಲಕುಮಾರ ನಾಯಕ ಬಿತ್ತಿಪತ್ರ ಬಿಡುಗಡೆಗೊಳಿಸಿದರು
Published on

ಬಾಗಲಕೋಟೆ: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ಮೇಕ್ರಿ ವೃತ್ತದ ಹತ್ತಿರ ಕೃಷ್ಣ ವಿಹಾರದಲ್ಲಿ ಫೆ.೨೭ ರಂದು ಬೆಳಗ್ಗೆ ೧೦:೩೦ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ೩,೨೦೦ ನೋಂದಣಿ ಮಾಡಿಸಿದ್ದು, ಅಂದಾಜು ೩,೫೦೦ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆ ಸಂಘದಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಜತೆಗೆ ಒಒಡಿ ಸೌಲಭ್ಯ ಸಹ ದೊರೆಯಲಿದೆ. ಹಳೇ ಪಿಂಚಣಿ ಯೋಜನೆ ಮರು ಜಾರಿ, ೭ನೇ ವೇತನ ಆಯೋಗದ ಅನುಷ್ಠಾನ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದರು.

ಸಂಘದ ಪದಾಧಿಕಾರಿಗಳಾದ ಗೋಪಾಲ ನೀಲನಾಯಕ, ವಿಠ್ಠಲ ವಾಲಿಕಾರ, ಸಂಜೀವ ಸತ್ಯರೆಡ್ಡಿ, ಸುರೇಶ ಇಂಜಗನೇರಿ, ಅನಿಲಕುಮಾರ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net