

ಚಿತ್ರದುರ್ಗ: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ಫೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿ ಸಮೂಹಕ್ಕೆ ಅರಿವು ಮೂಡಿಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಿಂದ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಪರಾಜು ಉದ್ಘಾಟಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಂ.ಅನಿಲ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಪ್ರಾಂಶುಪಾಲ ಬಿ.ರಮೇಶ್, ಉಪನ್ಯಾಸಕರಾದ ಪುರುಷೋತ್ತಮ್, ಸೌಮ್ಯಾ, ನಾಜ್ನೀನ್, ಜಿ.ಆರ್.ಪ್ರದೀಪ್‌ಕುಮಾರ್ ಇತರರಿದ್ದರು.