ಫ್ರೂಟ್ ಇರ್ಫಾನ್ ಹತ್ಯೆ, ಐವರ ಬಂಧನ

Crime Logo
Published on

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಅಲ್​ತಾಜ್ ಸಭಾಭವನ ಬಳಿ ಆ. 6ರಂದು ಧಾರವಾಡದ ಫ್ರೂಟ್ ಇರ್ಫಾನ್ ಮೇಲೆ ಗುಂಡಿನ ಮಳೆಗರೆದು ಹತ್ಯೆ ಮಾಡಿ ಪರಾರಿಯಾಗಿರುವವರಿಗೆ ನೆರವಾಗುವ ಮೂಲಕ ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬುಲೆಟ್ ಚಲಾಯಿಸಿದ ಧಾರವಾಡದವರಾದ ಅಫ್ತಾಬ್ ಬೇಪಾರಿ, ಡಿಯೋ ಚಲಾಯಿಸಿದ ತೌಸೀಫ್, ಕಾರು ಚಾಲನೆ ಮಾಡಿದ್ದ ಅಮೀರ ತಮಟಗಾರ, ಆರೋಪಿಗಳಿಗೆ ಹಣ ನೀಡಿದ್ದನೆನ್ನಲಾಗಿರುವ ಮೊಮಿನ್ ಹಾಗೂ ಇನ್ನೊಬ್ಬನನ್ನು ಬಂಧಿಸಲಾಗಿದೆ. ಫ್ರೂಟ್ ಇರ್ಫಾನ್ ಮೇಲೆ ಗುಂಡು ಹಾರಿಸಿದವರು ಮುಂಬೈನಿಂದ ಬಂದಿದ್ದ ಬಾಡಿಗೆ ಹಂತಕರು ಎನ್ನಲಾಗಿದ್ದು, ಅವರು ಪರಾರಿಯಾಗಿದ್ದಾರೆ. ಹತ್ಯೆಗೈದು ಪರಾರಿಯಾಗಲು ನೆರವಾದ ಸ್ಥಳೀಯ ತಂಡಕ್ಕೆ ಮೊಮಿನ್ 3 ಲಕ್ಷ ರೂ. ಹಾಗೂ ಮುಂಬೈನಿಂದ ಬಂದಿದ್ದ ಹಂತಕರಿಗೆ 5 ಲಕ್ಷ ರೂ.ಗಳನ್ನು ನೀಡಿದ್ದನು ಎಂದು ಹೇಳಲಾಗಿದೆ. ಕೃತ್ಯಕ್ಕೆ ಬಳಕೆಯಾಗಿದ್ದ 2 ಬೈಕ್ ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net