ಬಂಗಾರ ಧಾಮ; ಎಸ್.ಬಂಗಾರಪ್ಪ ಸಮಾಧಿಗೆ ನಮನ

WEB SOOOOOOOOOOR
Published on

ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 11ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಧುಬಂಗಾರಪ್ಪ ಅವರು ಮುಖಂಡರು ಹಾಗೂ ಸಂಬಂಧಿಗಳೊಂದಿಗೆ ಆಗಮಿಸಿ ಪೂಜೆ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಧುಬಂಗಾರಪ್ಪ, ಬಂಗಾರಪ್ಪ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ, ಹಿಂದುಳಿದ ವರ್ಗಗಳ, ರೈತರ ಪರವಾದ ಅನೇಕ ಜನಪರ ಯೋಜನೆ ಜಾರಿಗೊಳಿಸಿದ್ದರು. ಅವು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರ ಆದರ್ಶ ರಾಜಕೀಯವನ್ನು ನನ್ನ ಜೀವನದಲ್ಲಿ ಅಳವಡಿಸಿಕೊಂಡು ಸದಾ ಜನ ಸೇವೆಯಲ್ಲಿ ತೊಡಗಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net