ಬಂಜಾರ ಸಂಸ್ಕೃತಿ ಉತ್ಸವ 26, 27ಕ್ಕೆ

Sardhar Sevalal Swamiji
Published on

ಚಿತ್ರದುರ್ಗ: ಪ್ರತಿ ವರ್ಷದಂತೆ ಈ ಬಾರಿಯೂ ರಾಷ್ಟ್ರನಾಯಕ ಎಸ್.ನಿಜಲಿಂಗಪ್ಪ ಸ್ಮಾರಕ ಭವನದ ಆವರಣದಲ್ಲಿ ಅ. 26, 27ರಂದು ಬಂಜಾರ ಬುಡಕಟ್ಟು ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿದೆ ಎಂದು ಲಂಬಾಣಿ ಮಠದ ಸರ್ದಾರ್ ಶ್ರೀ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು.


ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉತ್ಸವದಲ್ಲಿ ಅತೀ ಹಿಂದುಳಿದ ಸಮುದಾಯಗಳ ಸಮಾಲೋಚನಾ ಸಮಾರಂಭ ಆಯೋಜಿಸಿದ್ದೇವೆ. ಈ ಮೂಲಕ ಸಮುದಾಯಗಳು ಎದುರಿಸುತ್ತಿರುವ ಕಷ್ಟ, ಯಾರ ಕಾಳಜಿ ಇಲ್ಲದೆಯೆ ತೊಂದರೆಗೆ ಒಳಗಾದ ಸಮಾಜಗಳ ಸಂಘಟನೆಗೆ ಆದ್ಯತೆ ನೀಡಿ, ಸರ್ಕಾರದಿಂದ ಸೌಲಭ್ಯ ಕಲ್ಪಿಸಿಕೊಡುವ ಉದ್ದೇಶವೂ ಇದೆ ಎಂದರು.


ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ಉತ್ತಮ ಮಳೆ-ಬೆಳೆಯಾಗಲೆಂದು ಪ್ರಾರ್ಥಿಸಿ ಲೋಕಕಲ್ಯಾಣಾರ್ಥ ಸಾಮೂಹಿಕ ಸಂಕಲ್ಪ ಪೂಜೆ ಹಮ್ಮಿಕೊಳ್ಳಲಾಗಿದೆ. ಬಿ.ಕೆ.ಹರಿಪ್ರಸಾದ್, ಸತೀಶ್ ಜಾರಕಿಹೊಳಿ ಸೇರಿ ಹಿಂದುಳಿದ ವರ್ಗಗಳ ಅನೇಕ ನಾಯಕರು, ಮಠಾಧೀಶರು, ಆನಂದ ಗುರೂಜಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಇದೇ ವೇಳೆ ಲಂಬಾಣಿ ಸಮಾಜದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಹಾಗೂ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದರು.


ಮುಖಂಡ ಮಂಜುನಾಥ್ ನಾಯ್ಕ್ ಮಾತನಾಡಿ, ದೇಶದಲ್ಲಿ ಸಂಸ್ಕೃತಿ ಉಳಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದ್ದೇವೆ. ಹೀಗಿದ್ದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಸಮಾಜವನ್ನು ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.


ಮುಖಂಡರಾದ ಕೆ.ಜಿ.ಪುರುಷೋತ್ತಮ ನಾಯ್ಕ್, ನಾಗರಾಜ್ ನಾಯ್ಕ್, ರಘು ಜೋಗಿಮಟ್ಟಿ, ವಕೀಲ ಪ್ರತಾಪ್ ಜೋಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net