ಬಂಜಾರ ಸಮಾಜ ನಿಂದಕರ ವಿರುದ್ಧ ಕ್ರಮ ಕೈಗೊಳ್ಳಿ

24manju4
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟಿಸಿದ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು. ಅರ್ಜುನ ಲಮಾಣಿ, ಸುಮಿತ್ರಾ ಚವ್ಹಾಣ, ಮಂಜುನಾಥ ಪಮ್ಮಾರ, ರೇಖಾ ರಾಥೋಡ ಇತರರಿದ್ದರು.
Published on

ಬೆಳಗಾವಿ: ಬಂಜಾರ (ಲಂಬಾಣಿ) ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಪ್ರತಿಭಟಿಸಿದರು. ಬಳಿಕ ಜಿಲ್ಲಾಧಿಕಾರಿ
ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ದತ್ತಾ ಬಿಲಾವರ ಎಂಬುವರು ಬಂಜಾರ ಸಮಾಜವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಅವರು ಬಹಿರಂಗವಾಗಿ ಸಮಾಜದವರಲ್ಲಿ ಕ್ಷಮೆ ಕೇಳಬೇಕು. ಅಲ್ಲದೆ, ಒಂದು ಸಮಾಜವನ್ನು ನಿಂದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ತಕ್ಷಣವ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದಿದ್ದಲ್ಲಿ ಪಾಲಿಕೆ ಚುನಾವಣೆ ಮುಗಿದ ಬಳಿಕ ತೀವ್ರ ಹೋರಾಟ ನಡೆಸಬೇಕಾಗುತ್ತದೆ. ಹೀಗಾಗಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಜಿಲ್ಲಾ ಘಟಕ ಕಾರ್ಯಾಧ್ಯಕ್ಷ ಅರ್ಜುನ ಲಮಾಣಿ, ಸುಮಿತ್ರಾ ಚವ್ಹಾಣ, ಮಂಜುನಾಥ ಪಮ್ಮಾರ, ರೇಖಾ ರಾಥೋಡ, ಸುರೇಶ ಚವ್ಹಾಣ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net