ಬಂಡಾರ ಮನೆ ಮತ್ತು ಅತಿಥಿಗೃಹ ನಿರ್ಮಾಣಕ್ಕೆ ಭೂಮಿಪೂಜೆ

temple
Published on

ಭಾಗಮಂಡಲ:

ತ್ರಿವೇಣಿ ಸಂಗಮ ಕ್ಷೇತ್ರ ಭಾಗಮಂಡಲದಲ್ಲಿ ವಿರಾಜಪೇಟೆ ಶಾಸಕರೂ ಆದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾನುವಾರ ಶ್ರೀ ಕಾವೇರಿ ತಾಯಿ ದೇವಾಲಯದ ಬಂಡಾರ ಮನೆ ಮತ್ತು ಶ್ರೀ ಭಗಂಡೇಶ್ವರ ದೇವಾಲಯದ ಅತಿಥಿಗೃಹ ನಿರ್ಮಾಣಕ್ಕೆ ಅಂದಾಜು 1.40 ಕೋಟಿ ರೂ. ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಶ್ರೀ ಕ್ಷೇತ್ರ ತಲಕಾವೇರಿ ಮತ್ತು ಭಾಗಮಂಡಲ ದೇವಾಲಯಗಳಿಗೆ ಹಲವು ವರ್ಷಗಳಿಂದ ಈ ಬೇಡಿಕೆಗಳು ಸ್ಥಳೀಯರು ಹಾಗೂ ಸಾರ್ವಜನಿಕ ವಲಯದಿಂದ ಬಂದಿದ್ದು ಶಾಸಕರು ಭೂಮಿ ಪೂಜೆ ನೆರವೇರಿಸ ಮೂಲಕ ಬಹುಕಾಲದ ಬೇಡಿಕೆಗೆ ಸ್ಪಂದಿಸಿದAತಾಗಿದೆ. ಈ ವೇಳೆ ಮಾತನಾಡಿದ ಪೊನ್ನಣ್ಣಈ ಎರಡು ಕಾಮಗಾರಿಗಳನ್ನು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ಪೂರೈಸಿ ಕೊಟ್ಟು ಭಕ್ತಾದಿಗಳ ಇಚ್ಛೆಯಂತೆ ಇದು ಅತಿ ಶೀಘ್ರದಲ್ಲಿ ಸರ್ವರ ಉಪಯೋಗಕ್ಕೆ ಲಭಿಸುವಂತಾಗಲಿ ಎಂದು ಹಾರೈಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಕೋಳಿಬೈಲು, ಪಕ್ಷದ ಪ್ರಮುಖರು, ದೇವಸ್ಥಾನ ಮಂಡಳಿಯ ಸದಸ್ಯರುಗಳು ಹಾಗೂ ಸ್ಥಳೀಯರು ಈ ವೇಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net