

ಚಾಮರಾಜನಗರ: ತಾಲೂಕಿನ ಹರದನಹಳ್ಳಿ-ಬಂಡಿಗೆರೆ ಗ್ರಾಮದಲ್ಲಿ ಶ್ರೀಶನೇಶ್ವರಸ್ವಾಮಿ ಪಲ್ಲಕ್ಕಿ ಉತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು.
ಗ್ರಾಮದಲ್ಲಿರುವ ಶ್ರೀಶನೇಶ್ವರಸ್ವಾಮಿ ದೇವಾಲಯದಲ್ಲಿ ಕಳೆದ ಒಂದು ತಿಂಗಳಿಂದಲೂ ವಿವಿಧ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು. ಅದರಂತೆ ಶನಿವಾರ ರಾತ್ರಿ ಶ್ರೀಶನೇಶ್ವರಸ್ವಾಮಿಯ ಪಲ್ಲಕ್ಕಿ ಉತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಯೊಂದು ಮನೆಯವರು ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಬಳಿಕ ಭಾನುವಾರ ಬೆಳಗ್ಗೆ ಗ್ರಾಮಸ್ಥರಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.