ಬಂಡೆಯಿಂದ ಕೆಳಗೆ ಬಿದ್ದ ಯುವಕನಿಗೆ ಗಾಯ

20 HANUR 4
Published on

ಹನೂರು: ಮಲೆಮಹದೇಶ್ವರ ಬೆಟ್ಟ ಸಮೀಪದ ಮಾದಪ್ಪನ ನೆಲೆಬೀಡಾದ ನಾಗಮಲೆ ದೇಗುಲದಲ್ಲಿ ಭಾನುವಾರ ಪೂಜೆ ಸಲ್ಲಿಸಿ ವಾಪಸ್ ಬರುತ್ತಿದ್ದಾಗ ಬಂಡೆಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಗಾಯಗೊಂಡಿದ್ದಾನೆ.

ಬೆಂಗಳೂರು ಕೆಂಗೇರಿ ಬಳಿಯ ಹೊನ್ನಳ್ಳಿ ಮಾರುತಿನಗರದ ನಾರಾಯಣಮೂರ್ತಿ ಅವರ ಪುತ್ರ ಶ್ರೀನಿಧಿ(29) ಗಾಯಗೊಂಡ ಯುವಕ. ಈತ ಭಾನುವಾರ ಬೆಳಗ್ಗೆ ತನ್ನ ಕುಟುಂಬಸ್ಥರೊಂದಿಗೆ ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳಿದ್ದು, ಪೂಜೆ ಸಲ್ಲಿಸಿ ವಾಪಸ್ ಬರುತ್ತಿರುವಾಗ ಮಾರ್ಗಮಧ್ಯೆ ಎತ್ತರವಾದ ಬಂಡೆಯ ಮೇಲೆ ನಿಂತಿದ್ದರು. ಈ ವೇಳೆ ಆಯತಪ್ಪಿ ಕಂದಕಕ್ಕೆ ಬಿದ್ದಿದ್ದಾರೆ. ತೀವ್ರ ಗಾಯಗೊಂಡ ಇವರನ್ನು ಕುಟುಂಬಸ್ಥರು ಸ್ಥಳೀಯರ ಸಹಕಾರ ಪಡೆದು ಮ.ಬೆಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆದೊಯ್ದರು. ಈ ಸಂಬಂಧ ಮ.ಬೆಟ್ಟದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು, ಬೈಕ್ ಡಿಕ್ಕಿ: ಮಲೆ ಮಹದೇಶ್ವರ ಬೆಟ್ಟ-ತಾಳುಬೆಟ್ಟ ಮಾರ್ಗಮಧ್ಯೆ ಸೋಮವಾರ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡಿದ್ದಾನೆ.

ತಾಲೂಕಿನ ಕೌದಳ್ಳಿ ಗ್ರಾಮದ ಗೋವಿಂದರಾಜು ಗಾಯಗೊಂಡವರು. ಮಧ್ಯಾಹ್ನ 2ರ ವೇಳೆಯಲ್ಲಿ ಮ.ಬೆಟ್ಟಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರು ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಗಾಯಗೊಂಡರು. ಸ್ಥಳೀಯರು ಗಾಯಾಳನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲದ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net