ಬಂಧನ ಭೀತಿ : ನಿರೀಕ್ಷಣಾ ಜಾಮೀನು ಕೋರಿದ ಸ್ಯಾಂಟ್ರೋ ರವಿ

santro ravi
Published on

ಮೈಸೂರು: ಪರಿಶಿಷ್ಟ ಸಮುದಾಯದ ಯುವತಿಗೆ ಉದ್ಯೋಗ ನೀಡುವ ಭರವಸೆ ನೀಡಿ ಆಕೆಯ ಮೇಲೆ ಅತ್ಯಾಚಾರವೆಸಗಿ ಬಲವಂತದಿಂದ ವಿವಾಹವಾದ ಆರೋಪ ಎದುರಿಸುತ್ತಿರುವ ನಗರದ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ತಮ್ಮ ವಕೀಲರ ಮೂಲಕ ನಗರದ 6ನೇ ಜೆಎಂಎಫ್ ನ್ಯಾಯಾಲಯಕ್ಕೆ ಶನಿವಾರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಾನೆ.

ಅತ್ಯಾಚಾರ, ಕೊಲೆ ಬೆದರಿಕೆ ಹಾಗೂ ಬಲವಂತ ವಿವಾಹಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ನ್ಯಾಯಾಲಯದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ. ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆತ ತಲೆಮರೆಸಿಕೊಂಡಿದ್ದಾನೆ. ಇದೀಗ ಬಂಧನ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ನಡುವೆ ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net