ಬಂಧನಕ್ಕೆ ಒತ್ತಾಯ

CTD 1 GEET NADINIGWODA--0006
Published on

ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ರೀತಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್‌ಅಧ್ಯಕ್ಷೆ ಗೀತಾನಂದಿನಿ ಗೌಡ ಒತ್ತಾಯಿಸಿದ್ದಾರೆ. ಈ ಪ್ರಕರಣದಿಂದಾಗಿ ರಾಜ್ಯದ ಜನರು ತಲೆತಗ್ಗಿಸುವಂತಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಕಾರ ನೀಡಬೇಕು. ಇಲ್ಲವಾದಲ್ಲಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net