ಬಕ್ರಿದ್ ಹಬ್ಬ ಹಿನ್ನೆಲೆ ಶಾಂತಿ ಸಭೆ

02sunti01
Published on

ಸುಂಟಿಕೊಪ್ಪ: ಬಕ್ರಿದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರೊಂದಿಗೆ ಭಾನುವಾರ ಶಾಂತಿ ಸಭೆ ನಡೆಯಿತು.

ಕುಶಾಲನಗರ ಉಪವಿಭಾಗದ ಡಿವೈಎಸ್‌ಪಿ ಪಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕುಶಾಲನಗರ ವೃತ್ತ ನಿರೀಕ್ಷಕ ದಿನೇಶ್ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪಾಲಿಸಬೇಕಾದ ಮತ್ತು ತೆಗೆದುಕೊಳ್ಳಬೇಕಾದ ಮುಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ಠಾಣಾಧಿಕಾರಿ ಭಾರತಿ ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ವಿವಿಧ ಮಸೀದಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net