ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಸೂಚನೆ

ಚಾಮರಾಜನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು. ಬಸವರಾಜು, ಪುರುಷೋತ್ತಮ್, ಬಿ.ಮಂಜು, ಸವಿತಾ ಮತ್ತು ಇತರರು ಇದ್ದರು.
ಚಾಮರಾಜನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು. ಬಸವರಾಜು, ಪುರುಷೋತ್ತಮ್, ಬಿ.ಮಂಜು, ಸವಿತಾ ಮತ್ತು ಇತರರು ಇದ್ದರು.
Published on

ಚಾಮರಾಜನಗರ: ಹೊಸದಾಗಿ ಬಗರ್ ಹುಕುಂ ಸಾಗುವಳಿ ಚೀಟಿ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬಗರ್ ಹುಕುಂ ಸಾಗುವಳಿ ಚೀಟಿ ಪರಿಶೀಲನಾ ಸಭೆಯಲ್ಲಿ ಲಾನುಭವಿಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದರು.
ಬಗರ್ ಹುಕುಂ ಸಾಗುವಳಿ ಚೀಟಿ ಪಡೆಯಲು ಹೊಸದಾಗಿ 33 ಅರ್ಜಿಗಳು ಸಲ್ಲಿಕೆಯಾಗಿವೆ. ಲಾನುಭವಿಗಳು ಜಮೀನನ್ನು ಉಳುಮೆ ಮಾಡುತ್ತಿದ್ದಾರೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚೀಟಿ ಪಡೆಯುವ ಸಂಬಂಧ ಹಣಕಟ್ಟುವ ಕುರಿತು ಮಾಹಿತಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಬಗರ್ ಹುಕುಂ ಸಾಗುವಳಿ ಚೀಟಿ ವಿತರಣೆಯಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು.
ತಹಸೀಲ್ದಾರ್ ಬಸವರಾಜು, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯರಾದ ಪುರುಷೋತ್ತಮ್, ಬಿ.ಮಂಜು, ಸವಿತಾ, ಗ್ರಾಮಲೆಕ್ಕಿಗರು, ರಾಜ ಸ್ವನಿರೀಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net