ಬಗರ್ ಹುಕುಂ ಸಾಗುವಳಿ ಚೀಟಿ ನೀಡಿ

Prabhakar
Published on

ಚಿತ್ರದುರ್ಗ: ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದ ತಾಲೂಕಿನ ಹಣೆಪಟ್ಟಿ ಹೊಂದಿರುವ ಮೊಳಕಾಲ್ಮೂರು ಕ್ಷೇತ್ರದ ಬಗರ್‌ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡದೆ, ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಪ್ರಭಾಕರ ಮ್ಯಾಸನಾಯಕ ದೂರಿದರು.

ಕೂಡಲೇ ಬಗರ್‌ಹುಕುಂ ಸಾಗುವಳಿ ಚೀಟಿ ವಿತರಿಸಲು ಜಿಲ್ಲಾಡಳಿತ ಕ್ರಮವಹಿಸಬೇಕು. ಮೊಳಕಾಲ್ಮೂರು ಮತ್ತು ಚಳ್ಳಕೆರೆಯ ತಹಸೀಲ್ದಾರ್‌ಗಳ ಮೂಲಕ ಸಮಿತಿ ಸಭೆ ನಡೆಸಿ, ಹಕ್ಕಿಗಾಗಿ ಹೋರಾಡುತ್ತಿರುವವರಿಗೆ ನ್ಯಾಯ ಕೊಡಿಸಬೇಕು ಎಂದು ಭಾನುವಾರ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net