ಬಗ್ಗವಳ್ಳಿ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

TKE sports
ಜಿಲ್ಲಾ ಮಟ್ಟದ ಅಂಗವಿಕಲರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ.ಪಾಲಾಕ್ಷಪ್ಪ ಪ್ರಶಸ್ತಿ ವಿತರಿಸಿದರು. ಜ್ಞಾನಮೂರ್ತಿ, ವೇದಮೂರ್ತಿ, ಜಯದೇವಪ್ಪ, ಪರಮೇಶ್ವರಪ್ಪ ಇತರರಿದ್ದರು.
Published on

ತರೀಕೆರೆ: ಅಜ್ಜಂಪುರ ತಾಲೂಕು ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ಅಂಗವಿಕಲ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಂಗವಿಕಲರ ಕ್ರೀಡಾಕೂಟದಲ್ಲಿ ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ವಿ.ಜಿ.ಬಿಂದು 50 ಮೀಟರ್ ಓಟ, ಗುಂಡು ಮತ್ತು ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಕೆ.ಪೋಷಿತ್ ಗುಂಡು ಮತ್ತು ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ.ಪಾಲಾಕ್ಷಪ್ಪ ಪದಕ, ಪ್ರಶಸ್ತಿ ಪತ್ರ ವಿತರಿಸಿದರು. ಡಯಟ್ ಉಪನ್ಯಾಸಕ ಜ್ಞಾನಮೂರ್ತಿ, ತರೀಕೆರೆ ಶೈಕ್ಷಣಿಕ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಕ ವೇದಮೂರ್ತಿ, ಜಯದೇವಪ್ಪ, ಶಿಕ್ಷಕ ಪರಮೇಶ್ವರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net