ಬಜೆಟ್​ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ

h15-CM Unkal 3
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಈ ಬಾರಿಯ ಬಜೆಟ್​ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಉಣಕಲ್​ನ ಸಿದ್ದಪ್ಪಜ್ಜನ ಜಾತ್ರೆ ಅಂಗವಾಗಿ ಮೂಲ ಗದ್ದುಗೆ ಮಠಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಸಿದ್ಧಪಡಿಸುವ ಕುರಿತು ವಿವಿಧ ಇಲಾಖೆಗಳ ಜತೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯಕ್ಕೆ ಅತ್ಯುತ್ತಮ ಬಜೆಟ್ ನೀಡಲಾಗುವುದು ಎಂದರು.

ಚಿಕ್ಕಂದಿನಿಂದಲೂ ನಾನು ಸಿದ್ದಪ್ಪಜ್ಜನ ದೇವಸ್ಥಾನಕ್ಕೆ ಬರುತ್ತಿದ್ದೆ. ಇವತ್ತು ಜಾತ್ರೆ ಇರುವುದರಿಂದ ಅಜ್ಜನ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದೇನೆ ಎಂದರು. ಕಾಯಿ ಒಡೆದು, ಉಪಾಹಾರ ಸೇವಿಸಿದರು. ಬೊಮ್ಮಾಯಿ ಅವರು ಆತ್ಮೀಯರ ಕುಶಲೋಪರಿ ವಿಚಾರಿಸಿದರು. ಶ್ರೀಮಠದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗೌರವಿಸಲಾಯಿತು.

ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ, ಮುಖಂಡ ಚನ್ನು ಪಾಟೀಲ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net