ಬಜೆಟ್‌ನಲ್ಲಿ ರೈತರಿಗೆ ಪೂರಕ ಅಂಶಗಳಿಲ್ಲ

IMG-20230711-WA0204
Published on

ಆಲೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ರೈತರಿಗೆ ಪೂರಕವಾದ ಅಂಶಗಳನ್ನು ಅಳವಡಿಸಿಲ್ಲ ಎಂದು ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ರೈತ ಸಂಘದ ಅಧ್ಯಕ್ಷ ಮೋಹನ್ ಕಾಡ್ಲೂರು ಬೇಸರ ವ್ಯಕ್ತಪಡಿಸಿದರು.


ರಾಜ್ಯ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿ ಯೋಜನೆಗಳಿಗಿಂತ ರೈತರ ಸಾಲಮನ್ನಾ ಮಾಡಬೇಕು. ರೈತರಿಗೆ ನೀಡುವ ಸಾಲ ನೀತಿಯನ್ನು ಸರಳೀಕರಿಸಬೇಕಿತ್ತು. ಇದರಿಂದ ರೈತರು ನೆಮ್ಮದಿಯಿಂದ ಜೀವನ ನಡೆಸಬಹುದಾಗಿತ್ತು. ಜತೆಗೆ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಯಾವುದೇ ವಿಶೇಷ ಅನುದಾನ ನೀಡಿಲ್ಲ. ರೈತ ಮತ್ತು ಕಾಫಿ ಬೆಳೆಗಾರರ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.


ಕಾರ್ಯದರ್ಶಿ ಜಯಣ್ಣ ಹೈದೂರು ಮಾತನಾಡಿ, ಆಲೂರು- ಸಕಲೇಶಪುರ ತಾಲೂಕಿನಲ್ಲಿ ದಶಕಗಳಿಂದ ತಲೆದೋರಿರುವ ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಬಜೆಟ್‌ನಲ್ಲಿ ಯಾವುದೇ ವಿಶೇಷ ಅನುದಾನ ಮೀಸಲಿಡದಿರುವುದು ಬೇಸರ ತಂದಿದೆ ಎಂದರು.


ತಾಲೂಕು ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಲತಾ, ತಾಲೂಕು ರೈತ ಸಂಘದ ಉಪಾಧ್ಯಕ್ಷ ದಾಸೇಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net