

ಕಂಪ್ಲಿ: ಪಟ್ಟಣದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2021-22 ಹಾಗೂ 2022-23ನೇ ಸಾಲಿನ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸಾಮಾಗ್ರಿಗಳನ್ನು ಶಾಸಕ ಜೆ.ಎನ್.ಗಣೇಶ್ ಬುಧವಾರ ವಿತರಿಸಿದರು.
ಕ್ಷೇತ್ರದ 122 ಫಲಾನುಭವಿಗಳಿಗೆ 2.50 ಲಕ್ಷ ರೂ. ಸಹಾಯಧನದೊಂದಿಗೆ ಸಲಕರಣೆ ವಿತರಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ರೈತರಿಗೆ ಈ ಸೌಲಭ್ಯ ಕಲ್ಪಿಸಲು ಇತರ ರೈತರು ಅವಕಾಶ ಕಲ್ಪಿಸಬೇಕು ಎಂದರು.
ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್.ಮಲ್ಲಿಕಾರ್ಜುನ ಮಾತನಾಡಿ, 122 ಫಲಾನುಭವಿಗಳ ಪೈಕಿ 95 ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲಾಗಿದೆ. 27 ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಯುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿ ಬಿ.ಎನ್.ರೇವಣಸಿದ್ಧಪ್ಪ, ಸಾಮಾಗ್ರಿ ಸರಬರಾಜುದಾರ ಆರ್.ಎರ‌್ರಿಸ್ವಾಮಿ, ತಹಸೀಲ್ದಾರ್ ಜೂಗಲ ಮಂಜುನಾಯಕ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಮುಖ್ಯಾಧಿಕಾರಿ ಕೆ.ದುರುಗಣ್ಣ, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಉಪಾಧ್ಯಕ್ಷೆ ಜಿ.ಸುಶೀಲಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಪ್ರಮುಖರಾದ ಕೆ.ಎಸ್.ಚಾಂದ್ ಬಾಷಾ, ಸಿ.ಆರ್.ಹನುಮಂತ, ಅರವಿ ಬಸವನಗೌಡ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಬಸವ ಇತರರಿದ್ದರು.