ಬಡತನ ನಿವಾರಣೆಗೆ ಹಲವು ಯೋಜನೆ

1
Published on

ಚಾಮರಾಜನಗರ: ರಾಜ್ಯ ಸರ್ಕಾರ ಬಡತನ ಹೋಗಲಾಡಿಸಲು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.


ಗುಂಡ್ಲುಪೇಟೆ ಪಟ್ಟಣದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಶನಿವಾರ ಆಯೋಜಿಸಿದ್ದ 670 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬಡವರು ಮುಖ್ಯವಾಹಿನಿಗೆ ಬರಬೇಕೆಂಬ ಅಭಿಲಾಸೆಯಿಂದ ಕೊಳಚೆ ನಿರ್ಮೂಲನ ಮಂಡಳಿಯಿಂದ ಯಾವುದೇ ತಾರತಮ್ಯವಿಲ್ಲದೆ ಎಲ್ಲ ಬಡವರಿಗೆ ನಿವೇಶನ ಹಂಚಿಕೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಗುಂಡ್ಲುಪೇಟೆ ಪುರಸಭೆಗೆ ಇನ್ನೂ 400 ನಿವೇಶನಗಳನ್ನು ಹಂಚಿಕೆಗೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಎಸ್.ನಿರಂಜನಕುಮಾರ್ ಮಾತನಾಡಿ, ಗುಂಡ್ಲುಪೇಟೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬಹುದಿನದ ಬಡ ಜನರ ಬೇಡಿಕೆಗಳಾದ ನಿವೇಶನ ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೂ ನೀಡಲಾಗುತ್ತದೆ. 18 ಕೋಟಿ ರೂ.ವೆಚ್ಚದಲ್ಲಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಕುಡಿಯುವ ನೀರು ಮತ್ತಿತರ ಮೂಲಸೌಕರ್ಯಗಳ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಕಬಿನಿ ಎಕ್ಸ್‌ಪ್ರೆಸ್ ಲೈನ್ ಶೀಘ್ರ ನಿರ್ಮಾಣವಾಗಲಿದೆ. ಪುರಸಭೆ ವ್ಯಾಪ್ತಿ ಜನರಿಗೆ 24 ಗಂಟೆ ನೀರು ನೀಡಲಾಗುವುದು ಎಂದು ಭರವಸೆ ನೀಡಿದರು.

ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ನಾಗೇಶ, ಕಿರಣಗೌಡ, ಶಶಿಧರ, ಬಸವರಾಜು, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಎಎಸ್‌ಪಿ ಉದೇಶ್, ಪುರಸಭೆ ಮುಖ್ಯಾಧಿಕಾರಿ ಹೇಮಂತರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net