ಬಡತನದಲ್ಲಿ ಅರಳಿದ ಪ್ರತಿಭೆಗಳು ಮಾದರಿಯಾಗಲಿ

snd33
ಸಿಂಧನೂರಿನ ನ್ಯಾಷನಲ್ ಪದವಿ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಶಿಬಿರ ಸಮಾರೋಪ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ವಿಸಿಬಿ ಎಜ್ಯುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಚಂದ್ರಶೇಖರ ಬೆನ್ನೂರು, ಪ್ರಾಚಾರ್ಯ ರಾಮಲಿಂಗಯ್ಯ, ಎಸ್‌ಎಸ್‌ಎಸ್ ಅಧಿಕಾರಿ ರವಿಕುಮಾರ ಮಸ್ಕಿ ಇದ್ದರು.
Published on

ಸಿಂಧನೂರು: ವಿದ್ಯಾರ್ಥಿಗಳಲ್ಲಿ ಕೀಳರಿಮೆ ಇರಬಾರದು. ಕೀಳರಿಮೆಗೆ ಅವಕಾಶ ನೀಡದಂತೆ ಸಿಕ್ಕ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆಯತ್ತ ಹೆಜ್ಜೆ ಹಾಕಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಹೇಳಿದರು.


ನಗರದ ನ್ಯಾಷನಲ್ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಮಾರೋಪ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ನಾವು ಬಡವರು, ಮಹಿಳೆಯರು ಎನ್ನುವ ಭಾವನೆಯೇ ಬರಬಾರದು.

ಬಡತನದಲ್ಲಿ ಅರಳಿದ ಪ್ರತಿಭೆಗಳು ಸಾಕಷ್ಟಿದ್ದು ಅವರೇ ಮಾದರಿಯಾಗಬೇಕು. ಎನ್‌ಎಸ್‌ಎಸ್ ಶಿಬಿರವು ನೈತಿಕ ಮೌಲ್ಯ, ಸೇವೆಯ ಮಹತ್ವದ ಬಗ್ಗೆ ಅರಿವು ಮೂಡಿಸುತ್ತವೆ ಎಂದರು.


ವಿಸಿಬಿ ಎಜ್ಯುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಚಂದ್ರಶೇಖರ ಬೆನ್ನೂರು, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ರವಿಕುಮಾರ ಮಸ್ಕಿ, ಉಪನ್ಯಾಸಕರಾದ ಶಶಿಕಲಾ ತಿಡಿಗೋಳ, ಮಹೇಶ ಹಿರೇಮಠ, ಹನುಮಂತರಡ್ಡಿ, ದೌಲಾಸಾಬ್, ಅನಂತ, ರಡ್ಡಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಬಸವರಾಜ ಸಾಹುಕಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net