ಬಡಮಕ್ಕಳ ಆಹಾರಕ್ಕೆ ದೇಣಿಗೆ ನೀಡಿ :ಸಿವಿಲ್ ನ್ಯಾಯಾಧೀಶ ಸಂತೋಷ್ ಮನವಿ

02Vtp1 Powstikamsa dina
Published on


ಕೊಡಗು : ಆಡಂಬರದ ಆಚರಣೆಗಳಿಗೆ ಖರ್ಚು ಮಾಡುವ ಹಣದಲ್ಲಿ ಶೇ.10 ರಷ್ಟನ್ನು ಬಡ ಮಕ್ಕಳ ಪೌಷ್ಟಿಕ ಆಹಾರ ವಿತರಣೆಗೆ ದೇಣಿಗೆ ನೀಡಿ ಎಂದು ವಿರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶ ಸಂತೋಷ್ ಕೊಠಾರಿ ಹೇಳಿದರು.


ವಿರಾಜಪೇಟೆ ಪುರಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಹಮ್ಮಿಕೊಂಡಿದ್ದ ಪೌಷ್ಟಿಕಾಂಶ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ನಾವು ಎಷ್ಟೇ ಅಭಿವೃದ್ದಿ ಹೊಂದಿದ ದೇಶವಾಗುತ್ತಿದ್ದರೂ ಶೇ.14 ರಷ್ಟು ಮಕ್ಕಳು ಪೌಷ್ಟಿಕಾಂಶ ಕೊರತೆಯಿಂದ ಸಾವನ್ನಪ್ಪುತ್ತಿರುವುದು ವಿಷಾದ. ಸರ್ಕಾರ ಇದಕ್ಕಾಗಿ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದನ್ನು ಅರ್ಹರಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಶ್ಲಾಘನೀಯ ಎಂದು ಹೇಳಿದರು.


ವಿರಾಜಪೇಟೆ ಸರ್ಕಾರಿ ಆಸ್ವತ್ರೆ ಮಕ್ಕಳ ತಜ್ಞ ಡಾ.ಆನಂದ್ ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ದಿನೇಶ್, ಪುರಸಭೆಯ ಅಧ್ಯಕ್ಷೆ ಸುಸ್ಮಿತಾ, ಅಂಗನವಾಡಿ ನೌಕರ ಸಂಘದ ಜಿಲ್ಲಾಧ್ಯಕ್ಷೆ ಕಾವೇರಮ್ಮ, ವಿರಾಜಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಸುಮಿತ್ರಾ, ಶಿಶು ಅಭಿವೃದ್ಧಿ ಯೋಜನಧಿಕಾರಿ ರಾಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net