

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳಿಂದಲೇ ಕಾಂಗ್ರೆಸ್ ಗೆಲ್ಲುತ್ತಿದೆ ಎಂಬುದು ಬಿಜೆಪಿ ತಲೆಗೆ ಬಂದಿದೆ. ಆದರೆ ನಾವು ಚುನಾವಣೆ ಗೆಲ್ಲುವ ಉz್ದೆÃಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬದಲಿಗೆ ಬಡವರ ಉದ್ದಾರಕ್ಕಾಗಿ ಈ ಯೋಜನೆಗಳನ್ನು ರೂಪಿಸಿz್ದÉÃವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ಜಿಪಂ ಆವರಣದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡ ಬಳಿಕ ರಾಜ್ಯದ ಜಿಡಿಪಿಯು ಗಣನೀಯವಾಗಿ ಹೆಚ್ಚಿದೆ ಎಂದು ಹೇಳಿದರು.
ದೇಶದಲ್ಲಿಯೇ ಕರ್ನಾಟಕ ರಾಜ್ಯದ ಜಿಡಿಪಿ ಗಣನೀಯವಾಗಿ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ವಾಣಿಜ್ಯ ಚಟುವಟಿಕೆಗಳು ಗಣನೀಯವಾಗಿ ಹೆಚ್ಚಲು ಕಾರಣವಾಗಿವೆ. ಇದೇ ಕಾರಣದಿಂದಾಗಿಯೇ ಕರ್ನಾಟಕದ ಜಿಡಿಪಿ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುವ ವಿಪಕ್ಷಗಳು ಈ ವಿಚಾರವನ್ನು ಮೊದಲು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ದೇಶ ಸೇರಿದಂತೆ ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸಿದ್ದು ಕಾಂಗ್ರೆಸ್. ಉಳುವವನಿಗೆ ಭೂಮಿ, ಬ್ಯಾಂಕ್ ರಾಷ್ಟಿö್ರÃಕರಣ ಸೇರಿದಂತೆ ಆರಂಭದಲ್ಲಿ ೧೦ ಅಂಶಗಳ ಕಾರ್ಯಕ್ರಮ, ಬಳಿಕ ೨೦ ಅಂಶಗಳ ಕಾರ್ಯಕ್ರಮ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಜನಪರವಾದ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಇದೀಗ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಯಾವ ಕಾರಣಕ್ಕೂ ನಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಹೇಳಿದ್ದರು. ಆದರೆ ಬಳಿಕ ಮೋದಿ ಗ್ಯಾರಂಟಿ ಆರಂಭಿಸಲಾಯಿತು ಆದರೂ ಅವು ಯಶಸ್ವಿಯಾಗಲಿಲ್ಲ. ಜನರ ಖಾತೆಗೆ ೧೫ ಲಕ್ಷ ರೂ. ಹಣ ಹಾಕುತ್ತೇವೆ ಎಂದರು. ಆದರೆ ಹಣ ಬರಲಿಲ್ಲ. ವಾರ್ಷಿಕ ೩ ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದರು. ಅದು ಆಗಲಿಲ್ಲ. ಆದರೆ ಕರ್ನಾಟಕದಲ್ಲಿ ಸಮರ್ಪಕವಾಗಿ ಅನುಷ್ಠಾನವಾಗಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ಚಿನ ಅನುದಾನ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗವಾಗುತ್ತಿದೆ ಹೀಗಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಆದರೆ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭಗೊAಡಿವೆ. ಹೀಗಿದ್ದರೂ ಸುಳ್ಳು ಆರೋಪ ಮಾಡುವುದರಲ್ಲಿ ವಿಪಕ್ಷಗಳು ನಿರತವಾಗಿವೆ ಎಂದು ದೂರಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ರಾಜ್ಯದ ೧.೨೨ ಕೋಟಿ ಮಹಿಳೆಯರ ಖಾತೆಗೆ ನೇರವಾಗಿ ಇದುವರೆಗೆ ೩೨೬೬೫ ಕೋಟಿ ರೂ. ಸಂದಾಯ ಮಾಡಲಾಗಿದೆ. ಗೃಹಜೋತಿ ಯೋಜನೆ ಅಡಿ ೧.೬೧ ಕೋಟಿ ಫಲಾನುಭವಿಗಳು ೧೧,೦೩೧ ಕೋಟಿ ರೂ. ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯಡಿಯಲ್ಲಿ ಇದುವರೆಗೆ ೩೩೬ ಕೋಟಿ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರವಾಸ ಮಾಡಿದ್ದಾರೆ. ಇನ್ನು ಅನ್ನ ಭಾಗ್ಯ ಯೋಜನೆ ಅಡಿ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಹಣ ನೀಡಿದರು ಅವರು ಅಕ್ಕಿಯನ್ನು ನೀಡಲಿಲ್ಲ. ಹೀಗಾಗಿ ಈ ಯೋಜನೆಯು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿ ಮಾಡಲಾಗುತ್ತಿದೆ. ಯುವ ನಿಧಿ ಯೋಜನೆ ಅಡಿಯಲ್ಲಿ ೩.೮೧ ಕೋಟಿ ಫಲಾನುಭವಿಗಳಿಗೆ ೧೪೯ ಕೋಟಿ ರೂ. ನೀಡಿz್ದÉÃವೆ ಎಂದು ಮಾಹಿತಿ ನೀಡಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಹಳ್ಳಿಹಳ್ಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿದರೆ ಜನರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಹೀಗಾಗಿ ನಮ್ಮ ನಡಿಗೆ ಗ್ಯಾರಂಟಿ ಯೋಜನೆ ಅನುಷ್ಠಾನದೆಡೆಗೆ ಎಂಬ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅದಾಲತ್ ನಡೆಸಲು ಉz್ದÉÃಶಿಸಲಾಗಿದೆ. ಈ ಬಗ್ಗೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಪ್ರಾಧಿಕಾರದಿಂದ ಪತ್ರ ಬರೆಯಲಾಗಿದೆ. ಒಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರನ್ನು ತಲುಪಬೇಕು ಎಂಬುದು ನಮ್ಮ ಉz್ದÉÃಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದ ಸ್ವಾಮಿ, ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಪ್ರಮುಖರಾದ ಡಾ. ಕೆ.ಪಿ.ಅಂಶುಮAತ್, ಮೊಹಮ್ಮದ್ ನಯಾಜ್, ಬಿ.ಎಚ್.ಹರೀಶ್, ಎ.ಎನ್.ಮಹೇಶ್ ಮತ್ತಿತರರಿದ್ದರು.