

ಕೆ.ಆರ್.ಪೇಟೆ: ಜನರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಕೆಲಸ ಮಾಡಲಿದ್ದೇನೆ. ಬಡವರು, ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಲಿದ್ದೇನೆ ಎಂದು ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ಭರವಸೆ ನೀಡಿದರು.
ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಕರ್ನಾಟಕಕ್ಕೆ ಕುಮಾರಣ್ಣ, ಮನೆಮನೆಗೆ ಮಂಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಕ್ಷ ನನ್ನ ತಾಯಿಯಿದ್ದಂತೆ ಎಂದು ಭಾವಿಸಿ ಕಳೆದ ಏಳೆಂಟು ವರ್ಷಗಳಿಂದಲೂ ಪ್ರಾಮಾಣಿಕವಾಗಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ಕಳೆದ ಚುನಾವಣೆಯಲ್ಲಿ ಸೋತಿದ್ದ ಜೆಡಿಎಸ್ ಕಾರ್ಯಕರ್ತರಿಗೆ 2023ರ ಚುನಾವಣೆ ಹೊಸ ಹುಮ್ಮಸ್ಸನ್ನು ತಂದಿದೆ ಎಂದರು. ಲಿಂಗಾಪುರ ಗ್ರಾಮದ ಮುಖಂಡರು, ಕಾರ್ಯಕರ್ತರು ಇತರರು ಇದ್ದರು.