ಬಡವರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶ

bkt-19-5
ನವನಗರದ ವಾಂಬೆ ಕಾಲೋನಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಮ್ಮ ಕ್ಲಿನಿಕ್ ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು.
Published on

ಬಾಗಲಕೋಟೆ: ಸರ್ವರಿಗೂ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಆರಂಭಿಸಲಾದ ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನವನಗರದ ವಾಂಬೆ ಕಾಲೋನಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.
ಬಾಗಲಕೋಟೆ ನಗರದ ವಾಂಬೆ ಕಾಲೋನಿ, ಹಳೆ ಬಾಗಲಕೋಟೆ ನೀರಿನ ಟ್ಯಾಂಕ್ ಹತ್ತಿರ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗಿದೆ. ಇನ್ನೊಂದು ಕಿಲ್ಲಾದ ಕೊತ್ತಲೇಶ ದೇವಸ್ಥಾನದ ಹತ್ತಿರ ಪ್ರಾರಂಭಿಸಲಾಗುತ್ತಿದೆ. ನಮ್ಮ ಕ್ಲಿನಿಕ್‌ಗಳಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವ ಎಲ್ಲಾ ಆರೋಗ್ಯ ಸೇವೆಗಳು ಬಡ ಜನರಿಗೆ ದೊರೆಯಲಿವೆ. ಆರೋಗ್ಯ ಸೇವೆಯಿಂದ ಯಾರು ವಂಚಿತರಾಗಬಾರದೆಂಬ ಉದ್ದೇಶ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಾಗಿದೆ. ಅದರಂತೆ ರಾಜ್ಯ ಸರ್ಕಾರ ಇಂದು ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ಗಳನ್ನು ಆರಂಭ ಮಾಡಿ ಜನರ ಆರೋಗ್ಯ ಕಾಪಾಡುವ ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಬುಡಾ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ನಗರಸಭೆ ಸಭಾಪತಿ ಅಂಬಾಜಿ ಜೋಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಆರ್‌ಸಿ.ಎಚ್ ಅಽಕಾರಿ ಡಾ.ಬಿ.ಜಿ.ಹುಬ್ಬಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net