ಬಡವರಿಗೆ ಆಹಾರ ಕಿಟ್ ವಿತರಣೆ

Aurad-1
Published on

ಔರಾದ್: ಶರಣತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ಲಾಲ್ ಬಹದ್ದೂರ್ ಶಿಕ್ಷಣ ಸಂಸ್ಥೆ ಸಹಯೋಗದಡಿ ಬಸವಣ್ಣ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಸಂಕಷ್ಟದಲ್ಲಿರುವ ಪಟ್ಟಣದ ಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಪರಸ್ಪರ ಅಂತರ ಕಾಯ್ದುಕೊಂಡು ವಿವಿಧ ಬಡಾವಣೆಗಳಲ್ಲಿ ಆಹಾರ ಕಿಟ್ ವಿತರಿಸಲಾಯಿತು. ಲಾಕ್ಡೌನ್ನಿಂದ ಹಲವಾರು ಜನರು ಕೆಲಸ ಇಲ್ಲದೆ ಮನೆಯಲ್ಲಿ ಕುಳಿತಿದ್ದಾರೆ. ಬಡವರು ಹಾಗೂ ನಿರ್ಗತಿಕರ ಕಷ್ಟ ಬಹಳಷ್ಟಿದೆ. ಅವರ ನೆರವಿಗೆ ಬರುವ ಉದ್ದೇಶದಿಂದ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಬಸವಣ್ಣ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಸವರಾಜ ಖಂಡ್ರೆ ಹೇಳಿದರು.
ಮುಖಂಡ ಅನೀಲಕುಮಾರ ಬೆಲ್ದಾರ್ ಮಾತನಾಡಿ, ಕರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತದ ನಿಯಮ ಪಾಲಿಸುವ ಮೂಲಕ ಸೋಂಕು ಓಡಿಸಲು ಕೈಜೋಡಿಸಬೇಕು ಎಂದು ಕೋರಿದರು. ಪುನೀತ ಸಾಳೆ, ವಿಶ್ವನಾಥ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net