ಬದಲಾವಣೆ ಬಯಸಿರುವ ಹನೂರು ಜನತೆ

DARSHAN JAYARAJ
ದರ್ಶನ್ ಜಯರಾಜ್
Published on

ಹನೂರು: ಹನೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಕಾಣದ ಹಿನ್ನೆಲೆಯಲ್ಲಿ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜಯರಾಜ್ ತಿಳಿಸಿದರು.

ಪಕ್ಷ ಸ್ಥಾಪನೆಯಾಗಿ 10 ವರ್ಷ ಕಳೆದಿದ್ದು, ಆಡಳಿತ ಚುಕ್ಕಾಣಿ ಹಿಡಿದಿರುವ ರಾಜ್ಯಗಳಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಈ ದಿಸೆಯಲ್ಲಿ ಪಕ್ಷದ ಸಿದ್ಧಾಂತ ಹಾಗೂ ಸಾಧನೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮನೆ ಮನೆಗೆ ಭೇಟಿ ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಕ್ಷದ ಪದಾಧಿಕಾರಿ ನಾಗೇಂದ್ರ ಮಾತನಾಡಿ, ಕೆಲವರು ಸಮಾಜ ಸೇವೆ ಮಾಡುವ ನೆಪದಲ್ಲಿ ಹನೂರು ಕ್ಷೇತ್ರಕ್ಕೆ ಆಗಮಿಸಿದ್ದು, ಹಣದ ಆಮಿಷವೊಡ್ಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪಕ್ಷದ ಸದಸ್ಯರಾದ ಕೆಂಪರಾಜು, ಹರೀಶ್, ಅಬ್ದುಲ್ ರಜಾಕ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net