ಬದುಕಿಗೆ ಬಹು ಕೌಶಲ್ಯ ತರಬೇತಿ

bkt-7-1
ನವನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸೋಮವಾರ ನಲ್ ಜಲ್ ಮಿತ್ರ ಯೋಜನೆಯಡಿ ಹಮ್ಮಿಕೊಂಡ ೧೫ ದಿನಗಳ ಬಹು ಕೌಶಲ ತರಬೇತಿ ಕಾರ್ಯಕ್ರಮ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಎನ್.ಕಾಂಬಳೆ ಉದ್ಘಾಟಿಸಿದರು.
Published on

ಬಾಗಲಕೋಟೆ: ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ನೀರು ವಿತರಣಾ ನಿರ್ವಾಹಕರ ಬಹು ಕೌಶಲ ತರಬೇತಿಯು ಸಹಾಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಎನ್.ಕಾಂಬಳೆ ಹೇಳಿದರು.

ನವನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸೋಮವಾರ ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ರಾಜ್ಯ ಕೌಶಲ ಅಭಿವೃದ್ಧಿ ನಿಗಮ, ಡೇ-ಎನ್.ಆರ್.ಎಲ್.ಎಂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಯೋಗದಲ್ಲಿ ನಲ್ ಜಲ್ ಮಿತ್ರ ಯೋಜನೆಯಡಿ ಹಮ್ಮಿಕೊಂಡ ೧೫ ದಿನಗಳ ಬಹು ಕೌಶಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಅಭಿವೃದ್ಧಿಗೆ ಪೂರಕವಾಗಿ ಸರಕಾರ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸರ್ಕಾರ ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ತರಬೇತಿ ಪಡೆದ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀರು ವಿತರಣಾ ನಿರ್ವಾಹಕರಾಗಿ ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ೧೫ ದಿನಗಳ ವರೆಗೆ ನಡೆಯುವ ಬಹು ಕೌಶಲ ತರಬೇತಿ ಲಾಭವನ್ನು ಮಹಿಳೆಯರು ಪಡೆಯುವದರ ಜೊತೆಗೆ ಇತರೆ ಮಹಿಳೆಯರಿಗೆ ಸ್ಪೂರ್ತಿಯಾಗಬೇಕು ಎಂದರು.

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವಿ.ಎಸ್.ಹಿರೇಮಠ ಮಾತನಾಡಿ, ಮಹಿಳೆಯರು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದು, ಅವರಿಗೂ ಸಹ ನೀರು ವಿತರಣಾ ನಿರ್ವಾಹಕರ ಕಾರ್ಯವನ್ನು ಸ್ವಸಹಾಯ ಗುಂಪುಗಳಿಗೆ ತರಬೇತಿ ನೀಡಲು ಜಿಲ್ಲಾ ಪಂಚಾಯಿತಿ ಮುಂದಾಗಿದೆ. ಇದರಿಂದ ಗ್ರಾಮೀಣ ಮಟ್ಟದಲ್ಲಿ ನಲ್ಲಿ ನೀರಿನ ಪೈಪಲೈನ್‌ಗಳ ರಿಪೇರಿ ಕಾರ್ಯ ಮಾಡಬಹುದಾಗಿದೆ. ಇದಕ್ಕಾಗಿ ತರಬೇತಿದಾರರು ಇದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಕೌಶಲ ಅಭಿವೃದ್ಧಿ ಅಽಕಾರಿ ಗುರುಪಾದ ಹಿರೇಮಠ ಮಾತನಾಡಿ, ನಲ್ ಜಲ ಮಿತ್ರ ಯೋಜನೆಯಡಿ ೧೫ ದಿನಗಳ ತರಬೇತಿ ನೀಡಿ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತರಬೇತಿ ನೀಡಲಾಗುತ್ತಿದೆ. ಇದರ ನಂತರ ಪರೀಕ್ಷೆ ತೆಗೆದುಕೊಂಡು ಪ್ರಮಾಣ ಪತ್ರ ನೀಡಲಾಗುತ್ತದೆ. ಪ್ರಮಾಣ ಪತ್ರದೊಂದಿಗೆ ಟೂಲಕಿಟ್ ಹಾಗೂ ಸಮವಸ್ತç ಸಹ ನೀಡಲಾಗುತ್ತದೆ. ತರಬೇತಿ ಅವಽಯಲ್ಲಿ ಸ್ಟೆÊ-Àಂಡ್ ಸಹ ನೀಡಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಆಕಾಶ, ಸಹಾಯಕ ಯೋಜನಾ ನಿರ್ದೇಶಕ ಭೀಮಪ್ಪ ತಳವಾರ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಽಕಾರಿ ಎ.ಎ.ಅತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net