

ಬಾಗಲಕೋಟೆ: ಬದುಕಿನಲ್ಲಿ ಉದ್ಯೋಗವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತಿದ್ದು, ವಿದ್ಯಾರ್ಥಿಗಳು ಉದ್ಯೋಗಿಗಳಾಗಿ ಉದ್ಯಮಿಗಳಾಗಬೇಕು ಎಂದು ಪ್ರಾಚಾರ್ಯ ಡಾ. ಅರುಣಕುಮಾರ ಗಾಳಿ ಅವರು ಹೇಳಿದರು.
ಅವರು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ೨೦೨೫-ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿಸಿದ ನಂತರ ಉದ್ಯೋಗಕ್ಕಾಗಿ ಅಲೆದಾಡುವ ಪರಿಸ್ಥಿತಿ ಇತ್ತು, ನಮ್ಮ ಕಾಲೇಜಿನಲ್ಲಿ ಶಿಕ್ಷಣ ನೀಡುವದರ ಜೊತೆಗೆ ವಿದ್ಯಾರ್ಥಿಗಳ ಬಾವಿಭವಿಷ್ಯಕ್ಕಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ನಾವು ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿದೆ ಎಂದರು.
ಇ0ತಹ ಮೇಳಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಉದ್ಯೋಗವನ್ನು ಹೊಂದಬೇಕು. ನಮ್ಮ ಕಾಲೇಜಿನ ಹಲವಾರು ವಿದ್ಯಾರ್ಥಿಗಳು ಇಂತಹ ಉದ್ಯೋಗ ಮೇಳಗಳ ಮೂಲಕ ಉದ್ಯೋಗ ಪಡೆದು ಉತ್ತಮ ಸ್ಥಾನದಲ್ಲಿರುವುದು ಕಾಲೇಜಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಸ್ಪೆಕ್ಟçಂ ಟ್ಯಾಲೆಂಟ್ ಮ್ಯಾನೇಜಮೆಂಟ್ ಪ್ರ.ಲಿ.ಕಂಪನಿಯ ಮಾನವ ಸಂಪನ್ಮೂಲ ಅಽಕಾರಿ ಪ್ರಭು ಎಸ್. ಮಾತನಾಡಿ, ವಿದ್ಯಾರ್ಥಿಗಳು ಪದವಿ ಶಿಕ್ಷಣ ಮುಗಿಸಿದ ನಂತರ ಅವರ ಜೀವನ ಆರ್ಥಿಕವಾಗಿ ಸದೃಢವಾಗಬೇಕಾದರೆ ಮೊದಲು ಉದ್ಯೋಗವನ್ನು ಮಾಡುವ ಮನೋಭಾವವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಾ.ಜಿ.ಜಿ.ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವ ಸದಾಶಯದೊಂದಿಗೆ ಉದ್ಯೋಗ ಕೊಡುವವರನ್ನು ಹಾಗೂ ಉದ್ಯೋಗ ಆಕಾಂಕ್ಷಿಗಳನ್ನು ಈ ಮೇಳದ ಮೂಲಕ ಒಂದೇ ವೇದಿಕೆಯಲ್ಲಿ ಕರೆ ತಂದು ಉದ್ಯೋಗ ಅವಕಾಶವನ್ನು ಕಲ್ಪಿಸುವ ಕಾರ್ಯವನ್ನು ಕಾಲೇಜು ಮಾಡುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಸುಷ್ಮೀತಾ ಉಪಸ್ಥಿತರಿದ್ದರು. ಡಾ.ಚಂದ್ರಶೇಖರ ಕಾಳನ್ನವರ ಸ್ವಾಗತಿಸಿದರು. ಡಾ.ಸುಮಂಗಲಾ ಮೇಟಿ ನಿರೂಪಿಸಿದರು. ದೇವೆಂದ್ರ ನಾಯಕ ವಂದಿಸಿದರು.