ಬನವಾಸೆ ರಂಗಸ್ವಾಮಿ ಪರ ಕಾಂಗ್ರೆಸ್ ಮುಖಂಡರಿಂದ ಮತ ಯಾಚನೆ

ಬನವಾಸೆ ರಂಗಸ್ವಾಮಿ ಪರ ಕಾಂಗ್ರೆಸ್ ಮುಖಂಡರಿಂದ ಮತ ಯಾಚನೆ
Published on

ಹಾಸನ: ಮೇ. 10 ರಂದು ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ ಪರವಾಗಿ ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಮಹೇಶ್ ಮತ್ತು ಬಾಗೂರು ಮಂಜೇಗೌಡ, ವೆಂಕಟೇಗೌಡ, ಯೋಗೇಶ್, ಜಗನ್ನಾಥ್ ಅವರ ತಾಲೂಕಿನ ಬೈಲಹಳ್ಳಿ ಸೇರಿದಂತೆ ಸುತ್ತಮುತ್ತ ಗ್ರಾಮದಲ್ಲಿ ಬಿರುಸಿನ ಮತ ಯಾಚನೆ ಮಾಡಿದರು ಪ್ರಚಾರಕ್ಕೆ ಬೈಲಹಳ್ಳಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಹಿಳೆಯರು ಆರತಿ ಎತ್ತುವ ಮೂಲಕ ಬರಮಾಡಿಕೊಳ್ಳಲಾಯಿತು.

ನಂತರ ಬಿ.ಪಿ. ಮಂಜೇಗೌಡ ಅವರು ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಬನವಾಸೆ ರಂಗಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿದ್ದು, ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಕಾಂಗ್ರೆಸ್ ನಾಯಕರ ಕೈಗೆ ಬಲ ನೀಡಬೇಕು ಎಂದರು.

ನಮ್ಮ ಜನ ಯಾರೂ ಹಸಿವಿನಿಂದ ಬಳಲಬಾರದು ಎಂದು ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೊಡುವುದರ ಮೂಲಕ ಅನ್ನಭಾಗ್ಯ ಯೋಜನೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಮತ್ತೆ ಜಾರಿಗೆ ತರುವುದಾಗಿ ಹೇಳಿದೆ. ಹಾಗೆಯೇ ಅಲ್ಪಸಂಖ್ಯಾತರಿಗೆ ಒಬಿಸಿ 2ಬಿ ವರ್ಗದಡಿ ಶೇ. 4ರಷ್ಟು ಮೀಸಲಾತಿಯನ್ನು ಪುನಃ ನೀಡುವುದಾಗಿ ಘೋಷಣೆ ಮಾಡಿದೆ. ಈ ಹಿಂದೆ ಪ್ರಕಟಿಸಿದ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳ ಜಾರಿಗೆ ಬದ್ಧವಾಗಿರುವುದಾಗಿ ತಿಳಿಸಿದೆ. ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ ಪ್ರಮುಖ ಹತ್ತು ಅಂಶಗಳು ತರಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net