ಬನ್ನಡ್ಕದಲ್ಲಿ ಕಾಡುಕೋಣ ಪ್ರತ್ಯಕ್ಷ

kadukona
Published on

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮದ ಬನ್ನಡ್ಕ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಕಾಡುಕೋಣ ಪ್ರತ್ಯಕ್ಷವಾಗಿದೆ. ಪಡುಮಾರ್ನಾಡು ಪಂಚಾಯಿತಿಗೆ ಹೋಗುವ ರಸ್ತೆ ಬದಿ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಪುತ್ರನ್ ಎಂಬುವರ ಮನೆ ಬಳಿ ಕಂಡುಬಂದಿರುವ ಕಾಡುಕೋಣದ ಚಿತ್ರವನ್ನು ಅದೇ ದಾರಿಯಲ್ಲಿ ತೆರಳುತ್ತಿದ್ದ ಛಾಯಾಗ್ರಾಹಕ ಸುದರ್ಶನ ಎಂಬುವರು ಸೆರೆಹಿಡಿದಿದ್ದಾರೆ.

ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net