ಬನ್ನಿತಾಳಪುರದಲ್ಲಿ ಕಣ್ಣಿನ ಉಚಿತ ತಪಾಸಣೆ ಶಿಬಿರ

27-GPT-2
ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಸಾರ್ವಜನಿಕರ ಕಣ್ಣಿನ ತಪಾಸಣೆ ನಡೆಸಲಾಯಿತು.
Published on

ಗುಂಡ್ಲುಪೇಟೆ: ತಾಲೂಕಿನ ಬನ್ನಿತಾಳಪುರ ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ನೇತ್ರ ಪರೀಕ್ಷೆ ಮಾಡಿಸಿಕೊಂಡರು.

ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‌ಪ್ರಸಾದ್ ಹುಟ್ಟುಹಬ್ಬದ ಅಂಗವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಯಮ್ಮಣ್ಣಿ ಮಂಗಳವಾರ ಆಯೋಜಿಸಿದ್ದ ಶಿಬಿರದಲ್ಲಿ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ನುರಿತ ವೈದ್ಯರಾದ ಡಾ.ಜೈ ಓಸ್ವಾಲ್ ಮತ್ತು ಡಾ.ಚಿನ್ಮಯಿ ರೋಗಿಗಳನ್ನು ತಪಾಸಿಸಿದರು. ಶಸ್ತ್ರಚಿಕಿತ್ಸೆ ಅಗತ್ಯವಿದ್ದ 6 ಜನರನ್ನು ಕೊಯಮತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯ ಜಿ.ಮಹೇಶ್, ಮಾಜಿ ಸದಸ್ಯರಾದ ಬಿ.ಎಂ.ಮಹದೇವಶೆಟ್ಟಿ, ಡಿ.ಮಹೇಶ್, ಸಿದ್ದಶೆಟ್ಟಿ, ಮಾದಶೆಟ್ಟಿ, ಕುಮಾರಸ್ವಾಮಿ, ರಜನಿ, ಮಲ್ಲಿಕಾರ್ಜುನಸ್ವಾಮಿ, ಬಿಲ್ ಕಲೆಕ್ಟರ್ ಮಲ್ಲು, ಅರವಿಂದ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಕಾಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net