ಬಯಲು ಭಾಗದ ಕೆರೆಗಳ ಭರ್ತಿಗೆ ಕ್ರಮ

20 kdr 1 web
Published on

ಕಡೂರು: ನಿರಂತರ ಬರಗಾಲಕ್ಕೆ ತುತ್ತಾಗುತ್ತಿದ್ದ ಬಯಲು ಪ್ರದೇಶಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.

ದೇವನೂರು ಗ್ರಾಮದಲ್ಲಿ 12 ವರ್ಷಗಳ ನಂತರ ತುಂಬಿ ಹರಿಯುತ್ತಿರುವ ದೇವನೂರು ಕೆರೆಗೆ ಶನಿವಾರ ಬಾಗಿನ ಅರ್ಪಿಸಿದ ನಂತರ ಸಮಾರಂಭದಲ್ಲಿ ಮಾತನಾಡಿದ ಅವರು, ದೇವನೂರು ಭಾಗದ ಅಭಿವೃದ್ಧಿಗಾಗಿ 36 ಕೋಟಿ ರೂ. ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಾರಂಭವಾಗಿದೆ. ಈ ಭಾಗದ ಅಭಿವೃದ್ಧಿಗೆ ಶಾಸಕ ಸಿ.ಟಿ.ರವಿ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಜಾತಿ,ಧರ್ಮ ಮುಖ್ಯವಲ್ಲ. ಮತದಾರರು ಅಭಿವೃದ್ಧಿ ಕಾರ್ಯಗಳನ್ನು ಮಾಡುವವರ ಪರವಾಗಿ ಇರಬೇಕಿದೆ. ತಾರತಮ್ಯವಿಲ್ಲದೆ ಜಿಲ್ಲೆ ಅಭಿವೃದ್ಧಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net